
ದಾವಣಗೆರೆ, ಮಾರ್ಚ್ 25: ದಾವಣಗೆರೆ (ದಾವಣಗೆರೆ) ದಕ್ಷಿಣ ಕ್ಷೇತ್ರದ ಉಪಚುನಾವಣೆ ಹೈವೋಲ್ಟೇಜ್ ಆಗಿದೆ. ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ (ಕಾಂಗ್ರೆಸ್) ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರ ಸಲ್ಲಿಸಿ ಬಿ ಫಾರಂ ಒದಗಿಸಿದ್ದಕ್ಕಾಗಿ ನಾಮಪತ್ರ ತಿರಸ್ಕಾರಗೊಂಡಿದೆ. ಆದರೆ, ಪಕ್ಷೇತರ ಅಭ್ಯರ್ಥಿಯಾಗಿ ಪೈಲ್ವಾನ್ ಸಲ್ಲಿಸಿದ ನಾಮಪತ್ರ ಊರ್ಜಿತವಾಗಿದೆ. ಕ್ಷೇತ್ರದಲ್ಲಿ 45 ನಾಮಪತ್ರ ಸಲ್ಲಿಕೆ ಆಗಿದೆ. ಆ ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. 42 ನಾಮಪತ್ರಗಳು ಮಾತ್ರ ಮಾನ್ಯವಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರೇ ನಿರ್ಣಾಯಕ. ಇಲ್ಲಿ 64,246 ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. ಆದರೆ ಹೈಕಮಾಂಡ್ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಸಮರ್ಥ್ ಜೊತೆಗೆ 36 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಅಭ್ಯರ್ಥಿಗಳಲ್ಲಿ 23 ಮಂದಿ ಮುಸ್ಲಿಂ ಸಮುದಾಯದವರೇ ಇದ್ದಾರೆ. ಕಾಂಗ್ರೆಸ್ ಗೆ ಇದು ನುಂಗಲಾರದ ಬಿಸಿತುಪ್ಪವಾಗಿದೆ.
ಕಾಂಗ್ರೆಸ್ಗೆ ಪಾಠ ಕಲಿಸಲು ಮುಂದಾದ್ರಾ ಮುಸ್ಲಿಮರು?
ದಾವಣೆಗೆರೆಯಲ್ಲಿ ಮುಸ್ಲಿಂ ಮತದಾರರು ಕಾಂಗ್ರೆಸ್ಗೆ ಪಾಠ ಕಲಿಸಲು ಮುಂದಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 26 ಕೊನೆ ದಿನ. ಇತ್ತ 22 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರಿಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಟಿಕೆಟ್ ನಿರಾಕರಿಸಿರುವ ಕಾಂಗ್ರೆಸ್ಸಿಗೆ ಬಿಸಿ ಮುಟ್ಟಿಸಲು ಮುಂದಾಗುವ ಸಾಧ್ಯತೆ ಇದೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಪಾಲಿನ ಮತದಾರರಾಗಿದ್ದರೆ ಕೈ ನಾಯಕರು ಮನವೊಲಿಸುವ ಸಾಧ್ಯತೆ ಇದೆ.
ದಾವಣಗೆರೆಯಲ್ಲಿ ಎಲ್ಲ ಸರಿಹೋಗುತ್ತೆ ಎಂದ ಡಿಕೆಶಿ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯದ ಬಗ್ಗೆ ಡಿಸಿಎಂ ಡಿಕೆಿದ್ದು, ನಾಮಪತ್ರ ಹಾಕಿದವರೆಲ್ಲ ನಮ್ಮವರೇ. ಎಲ್ಲವೂ ಸರಿಹೋಗಲಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಹೈಲೈಟ್ಸ್
- ಒಟ್ಟು ಮುಸ್ಲಿಂ ಮತದಾರರು: 64,246 (ಕ್ಷೇತ್ರದ ನಿರ್ಣಾಯಕ).
- ಕಣದಲ್ಲಿರುವ ಮುಸ್ಲಿಂ ಅಭ್ಯರ್ಥಿಗಳು: 23
- ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ: ಮಾರ್ಚ್ 26
- ಕಾಂಗ್ರೆಸ್ ತಂತ್ರ: ಅಬ್ದುಲ್ ಜಬ್ಬಾರ್ ಅವರ ಮನವೊಲಿಕೆ ಮತ್ತು ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸಭೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದು ಅಬ್ದುಲ್ ಜಬ್ಬಾರ್ ಪ್ರತಿಕ್ರಿಯಿಸಿ, ನಮ್ಮ ವರಿಷ್ಠರ ನಿರ್ಧಾರವನ್ನು ಗೌರವಿಸಬೇಕು. ಆ ಮೂಲಕ, ಕಾಂಗ್ರೆಸ್ ವಿರುದ್ಧ ಹೋಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ
ಒಟ್ನಲ್ಲಿ, ದಾವಣೆಗೆರೆಯಲ್ಲಿ ಬಂಡಾಯದ ಬೆಂಕಿ ಕಾಂಗ್ರೆಸ್ ಗೆ ಟೆನ್ಷನ್ ತಂದಿದ್ದು, ಈ ಬಗ್ಗೆ ಮಂಗಳವಾರ ವಿಧಾನಸೌಧದಲ್ಲಿ ಕಾಂಗ್ರೆಸ್ ನ ಮುಸ್ಲಿಂ ನಾಯಕರು ಸಭೆ ನಡೆಸಿದರು. ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರ ಮನವೊಲಿಕೆ, ಮತಗಳು ಚದುರಿಹೋಗದಂತೆ ತಂತ್ರಗಾರಿಕೆಯ ಬಗ್ಗೆ ಚರ್ಚೆ.
ಬಾಗಲಕೋಟೆಯಲ್ಲಿ 2 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
ಬಾಗಲಕೋಟೆ ಉಪಸಮರದಲ್ಲಿ ಮಲ್ಲಿಕಾರ್ಜುನ ಮೇಟಿ, ವೀರಣ್ಣ ಚರಂತಿ ಮಠ ಸೇರಿ ಒಟ್ಟು 16 ಅಭ್ಯರ್ಥಿಗಳು 26 ನಾಮಪತ್ರ ಸಲ್ಲಿಸಿದ್ದಾರೆ. ಈ ಕೆಳಗಿನ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ