ಧಾರವಾಡ, (ನವೆಂಬರ್ 05): ಲಿಂಗಾಯತ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಸಂಬಂಧ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ (ಕನ್ನೇರಿ ಮಠ ಕಾಡಸಿದ್ದೇಶ್ವರ ಸ್ವಾಮೀಜಿ) ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಇದೀಗ ಧಾರವಾಡ (ಧಾರವಾಡ) ಜಿಲ್ಲಾ ಪ್ರವೇಶಕ್ಕೂ ನಿರ್ಬಂಧಿಸಲಾಗಿದೆ. ಕನ್ನೇರಿ ಶ್ರೀಗಳಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನವೆಂಬರ್ 7 ರಂದು ಅಣ್ಣಿಗೇರಿಯ ಕಾರ್ಯಕ್ರಮ ಸಂಬಂಧ ಕನ್ನೇರಿ ಶ್ರೀಗಳು ಧಾರವಾಡಕ್ಕೆ ಆಗಮಿಸಬೇಕಿತ್ತು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಮನವಿಗಾಗಿ ಡಿಸಿ ಈ ಕ್ರಮ ಕೈಗೊಂಡಿದೆ.
ನವೆಂಬರ್ 7 ರಂದು ಅಣ್ಣಿಗೇರಿಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರಶ್ರೀ ಭಾಗವಹಿಸಬೇಕಿತ್ತು. ಈ ಸಂಬಂಧ ಪ್ರತಿಬಂಧಕ ಆದೇಶ ಹೊರಡಿಸಲು ಒತ್ತಾಯಿಸಿ ಧಾರವಾಡ ಜಿಲ್ಲೆಯ ಬಸವಪರ ಸಂಘಟನೆಗಳು ಮತ್ತು ಲಿಂಗಾಯತರು ಜಿಲ್ಲಾಧಿಕಾರಿ ಹಾಗೂ ಅಣ್ಣಿಗೇರಿ ತಾಲೂಕು ತಹಶೀಲ್ದಾರರಿಗೂ ಮನವಿ ಸಲ್ಲಿಸಿದರು. ಈ ಮನವಿ ಪರಿಶೀಲಿಸಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು, ಕನ್ನೇರಿ ಶ್ರೀ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತು: ಕನೇರಿ ಸ್ವಾಮೀಜಿ ಮತ್ತೊಂದು ಶಾಕ್ ಕೊಟ್ಟ ಕೋರ್ಟ್
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನಕೇರಿ ಗ್ರಾಮದಲ್ಲಿ ನವೆಂಬರ್ 5 ರಿಂದ 7 ರವರೆಗೆ ಸಹಜಾನಂದ ಸಪ್ತಾಹ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ, ನವೆಂಬರ್ 7 ರಂದು ನಡೆಯುವ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಕನ್ನೇರಿ ಮಠದ ಸ್ವಾಮೀಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಬಸವಪರ ಸಂಘಟನೆಗಳು ಮತ್ತಷ್ಟು ಕೆಂಡಾಮಂಡಲವಾಗಿದೆ. ಕಳೆದ ಅಕ್ಟೋಬರ್ 30ರಂದು ಬಸವಪರ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ನವೆಂಬರ್ 1ರಂದು ಅಣ್ಣಿಗೇರಿ ತಾಲೂಕು ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಲಿಂಗಾಯತ ಸ್ವಾಮೀಜಿಗಳು, `ಕನ್ನೇರಿ ಸ್ವಾಮೀಜಿ ಅಣ್ಣಿಗೇರಿ ತಾಲೂಕಿಗೆ ಬರುವುದನ್ನೂ ತಡೆಹಿಡಿಯಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ: ವಿಜಯಪುರ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೂ ಕನ್ಹೇರಿ ಶ್ರೀಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್
ತಾಲ್ಲೂಕಿನ ಹಳ್ಳಿಕೇರಿ ಗ್ರಾಮಕ್ಕೆ ಕಳೆದ 8 ವರ್ಷಗಳ ಹಿಂದೆ ಪ್ರಮೋದ್ ಮುತಾಲಿಕ್ ಅವರು ಬಂದುಹೋದ ನಂತರ ಮೂವರು ಕೊಲೆಯಾದರು. ಅಂದಿನಿಂದ ಈ ಗ್ರಾಮವನ್ನು ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಹೀಗಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಸಂವಿಧಾನಬಾಹಿರ ಹೇಳಿಕೆ ನೀಡಿರುವ ಕನ್ನೇರಿ ಸ್ವಾಮೀಜಿ ವಿರುದ್ಧ ಲಿಂಗಾಯತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿ ಬಂದರೆ ಅಶಾಂತಿ ಉಂಟಾಗಬಹುದು. ಹೀಗಾಗಿ ಶ್ರೀಗಳಿಗೆ ನಿರ್ಬಂಧ ವಿಧಿಸುವಂತೆ ಒತ್ತಾಯಿಸಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.