
ಹೌದು, ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನವಿಲೆ ಗ್ರಾಮದಲ್ಲಿರುವ ನಾಗೇಶ್ವರ ದೇವಾಲಯಕ್ಕಿಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಯಾವುದೇ ಭದ್ರತೆ ಇಲ್ಲದೆ ಖಾಸಗಿ ಕಾರಿನಲ್ಲಿ ಬಂದು ನಾಗದೇವರಿಗೆ ಪೂಜೆ ಸಲ್ಲಿಕೆ ಮಾಡಿ, ನಾಗೇಶ್ವರ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂ ಬದಲಾವಣೆ ಚರ್ಚೆ ಸಂದರ್ಭದಲ್ಲಿ ಡಿಕೆ ಶಿವವಕುಮಾರ್ ಅವರ ಈ ದೇವಾಲಯ ಭೇಟಿ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗೊ ಮೊದಲು ನವಿಲೆ ನಾಗೇಶ್ವರನ ಆಶೀರ್ವಾದ ಪಡೆದುಕೊಂಡಿದ್ದರು. ಒಂದು ವಾರದ ಹಿಂದೆಯಷ್ಟೇ ದೇವಾಲಯದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು.