ಅಮೆರಿಕದ ಮಹಿಳೆಯೊಬ್ಬರು ತನ್ನ ಮಕ್ಕಳೊಂದಿಗೆ ದೆಹಲಿ ಬಿಟ್ಟು, ಬೆಂಗಳೂರಿಗೆ ಬಂದಿರುವ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಇವರು ಹಂಚಿಕೊಂಡಿರುವ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೆಹಲಿಯ ವಾತಾವರಣದಲ್ಲಿ (ದೆಹಲಿ ವಾಯು ಮಾಲಿನ್ಯ) ಬದಲಾವಣೆ ಆಗಿದೆ. ರಾಷ್ಟ್ರರಾಜಧಾನಿಯಲ್ಲಿ ವಿಪರೀತ ವಾಯುಮಾಲಿನ್ಯ ಉಂಟಾಗಿದ್ದು, ಕೆಲವು ಭಾಗದ ಜನರಿಗೆ ಉಸಿರಾಡಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯನ್ನು ತಿಳಿದು ಈ ಮಹಿಳೆ ದೆಹಲಿಯನ್ನು ತ್ಯಜಿಸಿ, ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಗಾಳಿಯ ಗುಣಮಟ್ಟ ಕಳಪೆಯಾಗಿರುವುದರಿಂದ ತನ್ನ ಅವಳಿ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ದೆಹಲಿಯನ್ನು ತೊರೆದ ಮಹಿಳೆ ಈ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಹೀಗೆ ಹೇಳಲಾಗಿದೆ. “ನನ್ನ ಅವಳಿ ಮಕ್ಕಳೊಂದಿಗೆ ನಾನು ಮೂರು ವರ್ಷಗಳಿಂದ ದೆಹಲಿಯಲ್ಲಿ ವಾಸಿಸುತ್ತಿದ್ದೇನೆ. ಆದರೆ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾತಾವರಣವು ತುಂಬಾ ಹದಗೆಡುತ್ತಿದೆ. ಈ ಹಿಂದೆ ದೆಹಲಿಯ ವಾತಾವರಣವು ತುಂಬಾ ಇಷ್ಟವಾಯಿತು. ಇತ್ತೀಚಿಗಿನ ದಿನಗಳಲ್ಲಿ ಅಲ್ಲಿ ಉಸಿರಾಡಲು ಕಷ್ಟವಾಗುತ್ತದೆ. ನನ್ನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಭಾರತದ ಮೇಲೆ ದಾಳಿ ಮಾಡಲಿದೆ ಚೀನಾ, ಪಾಕ್: ಅಚ್ಚರಿ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ ನಾಸ್ಟ್ರಾಡಾಮಸ್
ವೈರಲ್ ಪೋಸ್ಟ್ ಇಲ್ಲಿದೆ ನೋಡಿ:
ಈ ಪೋಸ್ಟ್ ಗೆ ನೆಟ್ಟಿಗರು ಹೇಳಿದ್ದೇನು?
ಈ ಪೋಸ್ಟ್ ದೆಹಲಿಯಲ್ಲಿ ವಾತಾವರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದೆ. ಕಳೆದ 25 ವರ್ಷಗಳಿಂದ ಇದು ಹಾಗೆಯೇ ಇದೆ ಎಂದು ವ್ಯಕ್ತಿಯೊಬ್ಬರು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ವ್ಯಕ್ತಿ, ನಾನು ಎಂಟು ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ಆದರೆ ನನ್ನ ಕುಟುಂಬದಲ್ಲಿ ಅದೇ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಪ್ರತಿಯೊಬ್ಬರು ನಿಮ್ಮಂತೆ ಯೋಚನೆ ಮಾಡಿದ್ರೆ ಖಂಡಿತ ಈ ಸಮಸ್ಯೆ ಪರಿಹಾರ ಮಾಡಿಕೊಳ್ಳಬಹುದು, ಆದರೆ ಅವರು ಸ್ವಾರ್ಥಿಗಳು ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ