ಬೆಂಗಳೂರು, (ನವೆಂಬರ್ 11): ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿದ್ದರಾಮಯ್ಯ ಸೂಚನೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅದೇ ರೀತಿ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಬಿಡ ಪ್ರದೇಶಗಳಲ್ಲಿ ಸಿಎಂ ಹೈಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆ ಹೊರಡಿಸಿದ್ದು, ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಲಾಗಿದೆ.
ಅವಧಿಗಿಂತ ಮುಂಚಿತವಾಗಿ ಆಗಮಿಸುವಂತೆ ಮನವಿ ಮಾಡಿದೆ. ತೀವ್ರ ತಪಾಸಣೆ ನಡೆಯುತ್ತಿರುವ ಕಾರಣ ವಿಳಂಬ. ಭದ್ರತಾ ಪರಿಶೀಲನೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕು. ಈ ಪ್ರಯಾಣಿಕರು ಬೇಗ ವಿಮಾನ ನಿಲ್ದಾಣಕ್ಕೆ ಆಗಮಿಸಿ ತಪಾಸಣೆ ಪೂರ್ಣಗೊಳಿಸಬೇಕು. ಇದರಿಂದ ನಿಮ್ಮ ಪ್ರಯಾಣಕ್ಕೂ ಅನುಕೂಲ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.