ನವದೆಹಲಿ, ಜನವರಿ 05: ದೆಹಲಿಯಲ್ಲಿ 2020 ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್, ಶಾರ್ಜಿಲ್ ಇಮಾಮ್ ಮತ್ತು ಇತರರ ಜಾಮೀನು ಅರ್ಜಿಗಳನ್ನು ಇಂದು ವಜಾಗೊಳಿಸಲಾಗಿದೆ. ಡಿಸೆಂಬರ್ 10 ರಂದು, ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್.ವಿ. ರಾಜು ಮತ್ತು ಹಿರಿಯರಾದ ಕಪಿಲ್ ಸಿಬಲ್, ಅಭಿಷೇಕ್ ಸಿಂಘ್ವಿ, ಸಿದ್ಧಾರ್ಥ ದವೆ, ಸಲ್ಮಾನ್ ಖುರ್ಷಿದ್ ಮತ್ತು ಸಿದ್ಧಾರ್ಥ್ ಲೂಥ್ರಾ ಅವರ ವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಕಾಯ್ದಿರಿಸಿದ್ದರು.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ