ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​​​​ಗೆ ಲೈಂಗಿಕ ಕಿರುಕುಳ: ಅಪಾರ್ಟ್ಮಂಟ್​​ನಲ್ಲಿ ನಡೆದಿದ್ದೇನು?

ಬೆಂಗಳೂರಿನಲ್ಲಿ ಬ್ರೆಜಿಲ್ ಮಾಡೆಲ್​​​​ಗೆ ಲೈಂಗಿಕ ಕಿರುಕುಳ: ಅಪಾರ್ಟ್ಮಂಟ್​​ನಲ್ಲಿ ನಡೆದಿದ್ದೇನು?


ಬೆಂಗಳೂರು, (ಅಕ್ಟೋಬರ್ 28): ಬ್ರೆಜಿಲ್ ಮಾಡೆಲ್ ಗೆ ಕಿರುಕುಳ ನೀಡಿದ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 17 ರಂದು ಬೆಂಗಳೂರಿನಲ್ಲಿ (ಬೆಂಗಳೂರು) ಈ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಕುಮಾರ್ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಇದೇ ಅಕ್ಟೋಬರ್ 17 ರಂದು ಖಾಸಗಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿರುವ ಬ್ರೆಜಿಲ್ ಮೂಲದ ಮಾಡೆಲ್ ಡೆಲಿವರಿ ಆಯಪ್ ಮೂಲಕ ದಿನಸಿ ಆರ್ಡರ್ ಮಾಡಲಾಗಿದೆ. ಈ ವೇಳೆ ದಿನಸಿ ತಂದ ಡೆಲಿವರಿ ಏಜೆಂಟ್, ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮಾಡೆಲ್ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಆಕೆಯನ್ನು ಮಾತಿಗೆಳೆದು ಆಕೆ ಮೈ ಮುಟ್ಟಲು ಯತ್ನಿಸಿದ್ದಾನೆ. ಈ ಬೆಳವಣಿಗೆ ಬೆನ್ನಲ್ಲೇ ಡೆಲಿವರಿ ಏಜೆಂಟ್ ಅಲ್ಲಿಂದ ಪರಾರಿಯಾಗಿತ್ತು. ಬಳಿಕ ಮಾಡೆಲ್ ತನ್ನ ಉದ್ಯೋಗದಾತರಿಗೆ ಮಾಹಿತಿ ನೀಡಿದ್ದು, ಅವರ ಸಹಾಯದಿಂದ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಈ ದೂರಿನಿದ್ದಾರೆ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.



Source link

Leave a Reply

Your email address will not be published. Required fields are marked *