ಬೆಂಗಳೂರು, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಬೆಳ್ಳಂಬೆಳಗ್ಗೆ ದಟ್ಟ ಮಂಜು ಆವರಿಸಿದ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAL) ವಿಮಾನಗಳು ಹಾರಾಟದಲ್ಲಿ ವ್ಯತ್ಯಯ ಉಂಟಾಯಿತು. ದಟ್ಟ ಮಂಜಿನಿಂದಾಗಿ ವಿಸಿಬಿಲಿಟಿ ಕಡಿಮೆ ಆದ ಕಾರಣ, ಹತ್ತಾರು ವಿಮಾನಗಳ ಟೇಕಾಫ್ ನಿಗದಿತ ಸಮಯಕ್ಕಿಂತ ವಿಳಂಬವಾಯಿತು. ಈ ಅನಿರೀಕ್ಷಿತ ವಿಳಂಬದಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ