ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ


ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಹಾವೇರಿ, ಏಪ್ರಿಲ್ 10: ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮಗಳು ಇವೆ. ಅವು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿ ಬರುತ್ತವೆ ಎಂದು ಜನರ ಮೇಲೆ ಎಫ್‌ಐಆರ್ ದಾಖಲು ಮಾಡಿ ಜಾಗ ಖಾಲಿ ಮಾಡಿದ್ದಾರೆ. ಹಾವೇರಿಯ ಗುತ್ತಲ ತಾಂಡ, ಕರೂರು ಗ್ರಾಮಗಳ ನಿವಾಸಿ ವಕ್ಕಲು ಎಬ್ಬಿಸಿದ್ದಾರೆ. ಸರ್ಕಾರವೇ ಮೂರು ಸೌಲಭ್ಯದಿಂದ ಮನೆ ಮತ್ತು ಉಳುಮೆಗೆ ಅವಕಾಶ ಮಾಡಿದೆ. ಈಗ ಅರಣ್ಯ ಇಲಾಖೆ ಸಿಬ್ಬಂದಿ ಜಾಗ ಮೀಸಲು ಅರಣ್ಯಕ್ಕೆ ಬರುತ್ತೆ ಎಂದು ನೋಟೀಸ್ ನೀಡಲಾಗಿದೆ. ಐದು ವರ್ಷಗಳಿಂದ ಕೇಂದ್ರ ಸರ್ಕಾರದ ಸಚಿವರು ಮತ್ತು ಸಂಸದರನ್ನ ನಾನು ಭೇಟಿ ಮಾಡಿದ್ದೇನೆ. ಎಲ್ಲಿಯೋ ಎಸಿ ಕಚೇರಿಯಲ್ಲಿ ಕೂತು ಆದೇಶ ಮಾಡುತ್ತಾರೆ. ಹೀಗಾದರೆ ಸಾವಿರಾರು ಬಡವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಲೇ ಅವರು ಭಾವುಕರಾಗಿದ್ದಾರೆ. ಜೊತೆಗೆ ಈ ಸಂಬಂಧ ಸಂಸದರು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಕೇಂದ್ರೀಕರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *