Headlines

ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ

ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ


ರಸ್ತೆ ಸಂಚಾರದ ಬಗ್ಗೆ ಯಮರಾಜನಿಂದ ಜಾಗೃತಿಚಿತ್ರ ಕ್ರೆಡಿಟ್ ಮೂಲ: tv9 ಕನ್ನಡ

ದೇವನಹಳ್ಳಿ, ಫೆಬ್ರವರಿ 01: ಏರ್ಪೋರ್ಟ್ ರಸ್ತೆ (ವಿಮಾನ ನಿಲ್ದಾಣ ರಸ್ತೆ) ನಿತ್ಯ ಸಾವಿರಾರು ವಾಹನಗಳ ಸಂಚಾರದಿಂದ 24 ಗಂಟೆಯೂ ಫುಲ್ ಬ್ಯೂಸಿಯಾಗಿರುವ ನಗರದ ಪ್ರಮುಖ ರಸ್ತೆ. ಹೀಗಾಗಿ ಈ ರಸ್ತೆಯಲ್ಲಿ ನೂರಾರು ಅಪಘಾತಗಳು, ಹತ್ತಾರು ಜನರ ಸಾವುಗಳು (ಮರಣ) ಸಂಭವಿಸಿದ ವಾಹನ ಸವಾರರು ಮಾತ್ರ ಎಚ್ಚೆತ್ತುಕೊಂಡಿರಲಿಲ್ಲ. ಯಮರಾಜನೇ ರಸ್ತೆಗಿಳಿದಿದ್ದು, ಸವಾರರಿಗೆ ಎಚ್ಚರಿಕೆ ನೀಡಿದ್ದಾನೆ.

ಚಿತ್ರಗುಪ್ತ ಮತ್ತು ಯಮರಾಜರಿಂದ ಸಂಚಾರ ಜಾಗೃತಿ

ವೀಕೆಂಡ್ ಮೂಡ್‌ನಲ್ಲಿ ಜಾಲಿಡ್‌ಗೆ ಅಂತ ರಸ್ತೆಗಿಳಿಯುತ್ತಿದ್ದವರಿಗೆ ಯಾವಾಗಲೂ ಸಂಚಾರಿ ರೈತಿದ್ದರು. ಆದರೆ ಇಂದು ಮಾತ್ರ ಸಂಚಾರಿ ಪೊಲೀಸರ ಬದಲಿಗೆ ಚಿತ್ರಗುಪ್ತ ಮತ್ತು ಯಮರಾಜ ಪ್ರತ್ಯಕ್ಷವಾಗಿ ಸಂಚಾರ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ಏರ್‌ಲೈನ್ಸ್ ಸಿಬ್ಬಂದಿಯ ಬಂಧನ

ಅಂದಹಾಗೆ ದೇವನಹಳ್ಳಿ ಬಳಿ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ಥಾಣವಾದ ನಂತರ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಬರ್ತಿದೆ, ನಿತ್ಯ ನಡೆಯುವ ಅಪಘಾತಗಳಿಂದ ಜನರು ಕೈ-ಕಾಲು ಮುರಿದುಕೊಳ್ಳುವುದರ ಜೊತೆಗೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಇಂದು ಹಾಗೂ ಯಮ ವೇಷಧಾರಿ ಚಿತ್ರಗುಪ್ತರು ರಸ್ತೆಗಿಳಿದಿದ್ದು, ಟೋಲ್ ಬಳಿ ಬಂದ ವಾಹನ ಸವಾರರಿಗೆ ಬುದ್ಧಿವಾದ ಹೇಳಿದರು.

ದೇವನಹಳ್ಳಿಯ ಏರ್‌ಪೋರ್ಟ್ ಟೋಲ್ ಪ್ಲಾಜಾ ಬಳಿ ವಾಹನ ಸವಾರರನ್ನ ಅಡ್ಡಗಟ್ಟಿದ ಯಮ ಹಾಗೂ ಚಿತ್ರಗುಪ್ತ ವಾಹನ ಸವಾರರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯಾವುದೇ ರಕ್ಷಣೆ ಇಲ್ಲದೇ ಕಳಪೆ ಹಾಫ್ ಹೆಲ್ಮೆಟ್ ಹಾಕಿ ಸಂಚಾರ ನಡೆಸುತ್ತಿದ್ದಾರೆ. ಕೇವಲ ದಂಡ ವಿಧಿಸುತ್ತಾರೆ, ನಾನು ನೇರವಾಗಿ ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ. ಜೀವ ಮುಖ್ಯ ಸುರಕ್ಷಿತ ಹೆಲ್ಮೆಟ್ ಧರಿಸಿ ಅಂತ ವಾಹನ ಸವಾರರಿಗೆ ಸಂಚಾರಿ ನಿಯಮಗಳ ಬಗ್ಗೆ ಬಿತ್ತಿ ಪತ್ರಗಳನ್ನು ನೀಡಿ ಅರಿವು ಮೂಡಿಸಿದರು.

50ಕ್ಕೂ ಅಧಿಕ ಜನರ ಸಾವು

ಕೆಂಪೇಗೌಡ ಪೋರ್ಟ್ ರಸ್ತೆಯಲ್ಲಿ ನಿತ್ಯ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳಿಂದ ಸಾಯುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಕಳೆದ 2025ರಲ್ಲಿ ಯಲಹಂಕದಿಂದ ದೇವನಹಳ್ಳಿವರೆಗೆ 25 ಕಿ.ಮೀ ದೂರದಲ್ಲಿ ನೂರಕ್ಕೂ ಅಧಿಕ ಗಂಭೀರ ಅಪಘಾತ ಸಂಭವಿಸಿದ್ದು, 50ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ, ನೂರಾರು ಜನ ಕೈ-ಕಾಲು ಮುರಿದುಕೊಂಡಿದ್ದಾರೆ. ಹೀಗಾಗಿ ಜನರಲ್ಲಿ ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸಿದ್ದು, ಕಾರು ಚಾಲಕರು ಸೀಟ್ ಬೆಲ್ಟ್ ಮತ್ತು ಬೈಕ್ ಸವಾರರು ಮುಂಭಾಗ ಮತ್ತು ಹಿಂಭಾಗದ ಪ್ರಯಾಣಿಕರು ಐಎಸ್ಐ ಗುಣಮಟ್ಟದ ಹೆಲ್ಮೆಟ್ ಸಂಚಾರವನ್ನು ಪ್ರದರ್ಶಿಸಿದರು.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಸಾಮಾನ್ಯವಾಗಿ ರಸ್ತೆಯಲ್ಲಿ ನಿತ್ಯ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದಂತೆ ಅಪಘಾತಗಳ ಸಂಖ್ಯೆಯು ಹೆಚ್ಚಾಗುತ್ತಿದೆ, ಸಾವು-ನೋವುಗಳ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಈ ಅತೀ ವೇಗ ಹಾಗೂ ಅಪಘಾತಗಳನ್ನು ತಡೆಗಟ್ಟಲು ಎಐ ಕ್ಯಾಮರಾ ಸೇರಿದಂತೆ ಕಟ್ಟುನಿಟ್ಟಿನ ಸಂಚಾರಿ ನಿಯಮಗಳ ಜಾರಿಗೆ ತಂದಿದ್ದು ಇನ್ನಾದರೂ ಸವಾರರು ಎಚ್ಚೆತ್ತುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *