ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ


ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ

ದೇವನಹಳ್ಳಿ, ಅಕ್ಟೋಬರ್ 31: ಬೆಂಗಳೂರು ಗ್ರಾಮಾಂತರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ದೇವನಹಳ್ಳಿ (ದೇವನಹಳ್ಳಿ) ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಯಾಗಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ದೇವರ ಪೂಜೆ ಮಾಡಿಸಿಕೊಂಡು ಇದ್ದ ಕುಟುಂಬದಲ್ಲಿ ಏಕಾಏಕಿ ಅದೇನೋ ಗೊತ್ತಿಲ್ಲ, ಗುರುವಾರ ಸಂಜೆ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

60 ವರ್ಷ ವಯಸ್ಸಿನ ಕುಮಾರಪ್ಪ, ಇವರ ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಮೇಲಿನ ಹಿರಿಯ ಮಗ ಕ್ರೀಮಿನಾಶಕ ಸೇವಿಸಿ ನಂತರ ನೇಣಿಗೆ ಶರಣಾಗಿದ್ದಾನೆ. ತಂದೆ ಕುಮಾರಪ್ಪ ಹಾಗೂ ಹಿರಿಯ ಮಗ ಅರುಣ್ ಮೃತಪಟ್ಟಿದ್ದು, ಅರಚಾಡುತ್ತಾ ವಿಲವಿಲ ಒದ್ದಾಡುತ್ತಿದ್ದ ತಾಯಿ ರಮಾ ಹಾಗೂ ಕಿರಿಯ ಮಗನನ್ನು ಸ್ಥಳೀಯರು ಆಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದೆ.

ಸಾಲ ಬಾಧೆಯಿಂದ ಸಾಮೂಹಿಕ ಆತ್ಮಹತ್ಯೆ ನಿರ್ಧಾರ

ಮನೆಯ ಹಾಲ್ ಮದ್ಯದ ಬಾಟಲಿಗಳು ಮತ್ತು ಕ್ರಿಮಿನಾಶಕಗಳ ಬಾಟಲಿಗಳು ಇವೆ. ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ಇದೆ.

ಇದನ್ನೂ ಓದಿ: ಮನೆಕೆಲಸದಾಕೆಗೆ ಕೋಟಿ ರೂ ಮನೆ ಕೊಟ್ಟ ಒಡತಿ: ಆದ್ರೂ ತಿಂದ ಮನೆಗೆ ದ್ರೋಹ ಬಗೆದ್ಲು

ಘಟನೆಯ ಬಗ್ಗೆ ಮಾಹಿತಿ ತಿಳಿಯಬೇಕಾದರೆ ಚಿಕ್ಕಜಾಲ ಪೊಲೀಸರು ಹಾಗೂ ದೇವನಹಳ್ಳಿ ಎಸ್ಸಿಪಿ ಸ್ಥಳಕ್ಕಾಗಮಿಸಿ ಪರಿಶೀಲನೆ. ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನಿರಬಹುದು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಲದಬಾಧೆಯೇ, ಬೇರೆ ಕಾರಣವೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *