ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಅಲೋಕ್​​ ಕುಮಾರ್​​ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ


ಬೆಂಗಳೂರು, ಡಿಸೆಂಬರ್ 16: ಬಂದಿಖಾನೆ ವಿಭಾಗದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಹಾಗೂ ರಾಜಾತಿಥ್ಯಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. 15 ದಿನಗಳ ಒಳಗಾಗಿ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಲು ಜೈಲು ಸಿಬ್ಬಂದಿಗೆ ಗಡುವು ನೀಡಿದ್ದು, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳನ್ನು ಮೂರು ವರ್ಗಗಳಾಗಿ ವಿಂಗಡಿಸಲಾಗಿದೆ ಅಲೋಕ್ ಕುಮಾರ್ ಚಿಂತನೆಯ ಸ್ಥಿತಿಯಲ್ಲಿದೆ. ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳು, ಸಾಧಾರಣ ಅಪರಾಧ ಪ್ರಕರಣಗಳಲ್ಲಿ ಬಂಧಿಯಾಗಿರುವ ಆರೋಪಿಗಳು ಮತ್ತು ಲಘು ಪ್ರಕರಣದಲ್ಲಿ ಭಾಗಿಯಾದವರು ಎಂದು ವಿಂಗಡನೆಗೆ ಪ್ಲ್ಯಾನ್ ನಡೆದಿದೆ. ಆ ಮೂಲಕ ಘೋರ ಅಪರಾಧ ಮಾಡಿರುವ ಆರೋಪಿಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ಕ್ರಮ ಕೈಗೊಳ್ಳುವ ಚಿಂತನೆ ನಡೆಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *