ಧರ್ಮಸ್ಥಳ ಬುರುಡೆ ಕೇಸ್​ನಲ್ಲಿ ಮಹತ್ವದ ಬೆಳವಣಿಗೆ: ಷಡ್ಯಂತ್ರದ ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

ಧರ್ಮಸ್ಥಳ ಬುರುಡೆ ಕೇಸ್​ನಲ್ಲಿ ಮಹತ್ವದ ಬೆಳವಣಿಗೆ: ಷಡ್ಯಂತ್ರದ ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್


ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ವಿಚಾರಣೆಗಾಗಿ ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರಿಗೆ SIT ನೋಟಿಸ್

ಮಂಗಳೂರು, ಅಕ್ಟೋಬರ್ 25: ಧರ್ಮಸ್ಥಳ ಬುರುಡೆ ಪ್ರಕರಣ (ಧರ್ಮಸ್ಥಳ ಪ್ರಕರಣ) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರಿಗೆ ಎಸ್ ಐಟಿ ನೋಟಿಸ್

ಸೋಮವಾರ ಬೆಳಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ, ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ. ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

ಎಸ್ ಐಟಿ ನೋಟಿಸ್ ನಲ್ಲೇನಿದೆ?

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ನಾಲ್ವರಿಗೆ ಎಸ್‌ಐಟಿ ನೀಡಿರುವ ನೋಟಿಸ್‌ನಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆಯ ಕಲಂ35(3) ಅಡಿಯಲ್ಲಿ , ದಿನಾಂಕ 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತ ಸಂದರ್ಶನಕ್ಕಾಗಿ 27/10/2025 ರಂದು ಬೆಳಿಗ್ಗೆ 10.30ಕ್ಕೆ ಎಸ್‌ಐಟಿ ಕಛೇರಿಯನ್ನು ಹಾಜರಾಗಲು ಸೂಚಿಸಲಾಗಿದೆ.

ನೋಟಿಸ್‌ನಲ್ಲಿ, ಆರೋಪಿಗಳಿಗೆ ಇವುಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ: ಯಾವುದೇ ಅಪರಾಧವನ್ನು ನಡೆಸಬಾರದು, ಸಾಕ್ಷ್ಯಗಳಿಗೆ ಪ್ರಭಾವ ಬೀರಬಹುದು, ನ್ಯಾಯಾಲಯದ ಮುಂದೆ ಅಥವಾ ತನಿಖಾಧಿಕಾರಿಗಳ ಮುಂದೆ ಇರುವ ಸಂಗತಿಗಳನ್ನು ಸತ್ಯಹೀನವಾಗಿ ಹೇಳಬಾರದು, ನ್ಯಾಯಾಲಯ/ತದನಂತರ ತನಿಖೆಗೆ ಹಾಜರಾಗಬಾರದು, ಸಹಕಾರ ನೀಡುವುದು, ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಹಾಜರುಪಡಿಸುವುದು, ಆರೋಪಿಗಳು ಮತ್ತು ಬಂಧನಕ್ಕೆ ಸಹಕರಿಸುವುದು, ಮತ್ತು ಸಾಕ್ಷ್ಯಗಳನ್ನು ನಾಶಪಡಿಸುವುದು. ನೋಟಿಸ್ ಪಾಲನೆ ಮಾಡದಿದ್ದರೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಕಲಂ 35(6) ಅಡಿಯಲ್ಲಿ ದಸ್ತಗಿರಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹ ಉಲ್ಲೇಖಿಸಲಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಚಿನ್ನಯ್ಯ ತಾನು 100ಕ್ಕೂ ಹೆಚ್ಚು ಶವಗಳನ್ನು ಹೂತ ಕಾಣಿಸಿಕೊಂಡಿದ್ದಾನೆ. ಈ ಕುರಿತು ಸಾಕಷ್ಟು ಕಾರ್ಯಾಚರಣೆಗಳು ನಡೆದಿತ್ತು. ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರವೆಂಬ ಆರೋಪಗಳಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *