Headlines

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ


ಧಾರವಾಡ, ಫೆಬ್ರವರಿ 24: ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆ. ಈ ಸಂದರ್ಭದಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ. ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ. ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಹಣಕಾಸು ಇಲಾಖೆ 65,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ನೀಡಿ ಆರು ತಿಂಗಳಾದರೂ ಒಂದು ಸಂದರ್ಶನ ಸಹ ಕರೆದಿಲ್ಲ. ತಾತ್ಕಾಲಿಕ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸದಿದ್ದರೆ ರಾಜ್ಯವ್ಯಾಪಿ ಹೋರಾಟವನ್ನು ಆಯೋಜಿಸಲಾಗಿದೆ ಎಂದು ಸೂಚಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *