ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ

ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ


ಪ್ರಾತಿನಿಧಿಕ ಚಿತ್ರಚಿತ್ರ ಕ್ರೆಡಿಟ್ ಮೂಲ: varthabharati

ಬೆಂಗಳೂರು, ಮಾರ್ಚ್ 01: ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ (ಪೊಲೀಸ್ ವರ್ಗಾವಣೆಗಳು) ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಲಕ್ಷಾಂತರ, ಕೋಟ್ಯಂತರ ರೂ ಲಂಚ ಪಡೆದು ಅಥವಾ ರಾಜಕಾರಣಿಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ರಾಜ್ಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಎಂಬುವವರಿಂದ ಡಿಜಿಗೆ ಪತ್ರ ಬರೆಯಲಾಗಿದೆ. ಸದ್ಯ ಈ ಪತ್ರ ವೈರಲ್ ಆಗುತ್ತಿದೆ.

ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ವಿಚಾರವಾಗಿ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಲಂಚ ನೀಡಿ ಪೋಸ್ಟಿಂಗ್ ಪಡೆಯಬೇಕು ಎಂಬ ವಿಚಾರ ಹರಿದಾಡುತ್ತಿದೆ. ಇದರ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆ ಆಗಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಆಧುನಿಕ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ಬ್ಯಾಟರಾಯನ ಗೌಡ ಬಿ.ಪಿ.ಡಿಜಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಇನ್ನು ಇತ್ತೀಚೆಗೆ ಕೆಲವು ಅಧಿಕಾರಿಗಳನ್ನು ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. A,B,C,D ಗ್ರೂಪ್ ಹಾಗೂ ಗ್ರಾಮೀಣ ಪಂಚಾಯತ್ ರಾಜ್ ಇಲಾಖೆ ಪಿಡಿಓಗಳನ್ನು ಡಿಜಿಟಲ್ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇದರ ಬಗ್ಗೆ ರಾಜಕಾರಣಿಗಳು ಸೇರಿದಂತೆ ಜನರಿಂದ ಕೂಡ ಉತ್ತಮ ಪ್ರಶಂಸೆ ಇದೆ. ಹೀಗಾಗಿ ಇದೇ ಮಾದರಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡುವಂತೆ ಸುಮಾರು 14 ನಿಬಂಧನೆಗಳನ್ನು ಬ್ಯಾಟರಾಯನ ಗೌಡ ಬಿ.ಪಿ.

ಇದನ್ನೂ ಓದಿ: ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್ ಪೆಕ್ಟರ್ ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು

ಪತ್ರದಲ್ಲಿ ನಮೂದಿಸಿರುವ ನಿಬಂಧನೆಗಳೊಂದಿಗೆ ಡಿಜಿಟಲ್ ವಿಧಾನದಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯನ್ನು ಮಾಡಿ ಇಲಾಖೆಯಲ್ಲಿ ಪಾರದರ್ಶಕ, ರಾಜಕೀಯ ಹಸ್ತಕ್ಷೇಪರಹಿತ, ನಿಷ್ಪಕ್ಷಪಾತ, ಭ್ರಷ್ಟಾಚಾರ ರಹಿತ, ಒತ್ತಡರಹಿತ, ಸಮಗತೆ, ದಕ್ಷತೆ ಮತ್ತು ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಿಕೊಟ್ಟಂತೆ ಆಗುತ್ತದೆ. ಇದರಿಂದ ಸಮಾಜದಲ್ಲಿ ವಿಶೇಷತೆಯನ್ನು ಹೊಂದಿದೆ. ಆದ್ದರಿಂದ ಡಿಜಿಟಲ್ ವಿಧಾನದಲ್ಲಿ ಕೌನ್ಸಿಲಿಂಗ್ ಮುಖಾಂತರ ವರ್ಗಾವಣೆ ಮಾಡಲು ರಾಜ್ಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *