ಬೆಂಗಳೂರು, ಡಿಸೆಂಬರ್ 1: ಬಂಗಾಳ ಕೊಲ್ಲಿಯಲ್ಲಿ ಚೆನ್ನೈನಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿ ರೂಪುಗೊಂಡ ದಿತ್ವಾ ಚಂಡಮಾರುತವು ಪ್ರಸ್ತುತ ದುರ್ಬಲಗೊಂಡು ದೀಪ್ ಡಿಪ್ರೆಶನ್ ಆಗಿ ಪರಿವರ್ತನೆಗೊಂಡಿದೆ. ಇದರಿಂದ ಕರ್ನಾಟಕದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಿತ್ತು, ಕೆಲವು ಕಡೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಹವಮಾನ ಇಲಾಖೆಯ ನಿರ್ದೇಶಕ ಎಸ್‌ಎಸ್‌ಎಸ್ ಪಾಟೀಲ್ ಆಯ್ಕೆ ಮಾಡಿದ್ದಾರೆ. 1 ರಿಂದ ಡಿಸೆಂಬರ್ 4 ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಇಳಿಮುಖ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಂಟಿಗ್ರೇಡ್‌ಗೆ ಕುಸಿದಿದ್ದು, ಹಗಲಿನ ಹೊತ್ತಿನಲ್ಲಿ ಈ ಪ್ರಮಾಣದ ತಾಪಮಾನ ಕುಸಿತ ಅಪರೂಪ ಎಂದು ಅವರು ಹೇಳಿದ್ದಾರೆ. ರಾತ್ರಿ ಮತ್ತು ಹಗಲಿನ ನಡುವಿನ ತಾಪಮಾನ ವ್ಯತ್ಯಾಸ ಕೇವಲ 2-3 ಡಿಗ್ರಿ ಸೆಂಟಿಗ್ರೇಡ್‌ಗೆ ಇಳಿದಿರುವುದು ಚಳಿಯ ಅನುಭವವನ್ನು ಹೆಚ್ಚಿಸಿದೆ. ಬೆಂಗಳೂರಿನಲ್ಲಿ ಇಂದಿನಿಂದ ಮೂರನೇ ತಾರೀಖಿನವರೆಗೆ ಚಳಿಯ ವಾತಾವರಣ ಮುಂದುವರಿದಿದೆ, ನಂತರ ಬಿಸಿಲು ಮೂಡುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ