ಈ ಬಗ್ಗೆ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, “ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಇಡಲು ನಿರ್ಧರಿಸಿದ ಶಾಸಕರು ಈ ನಡೆಗೆ ನಾನು ಧನ್ಯ ಎಂದು ಬರೆದಿದ್ದಾರೆ.