ಬೆಂಗಳೂರು (ನ.23) ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗಡಿಗೆದರಿವೆ. ಸಿದ್ದರಾಮಯ್ಯ ಬಣ, ಡಿಕೆ ಶಿವಕುಮಾರ್ ಬಣ ನಾಯಕರಿಂದ ಹೈಕಮಾಂಡ್ ಬಳಿಕ ಭೇಟಿ ನೀಡಿದ ಸಿದ್ದರಾಮಯ್ಯನವರು ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮಯ್ಯ ಖರ್ಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಇನ್ನು ಸಚಿವ ಜಾರ್ಜ್, ಐಸಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದರ ಬೆನ್ನಲ್ಲೇ ಡಿಕೆಶಿ ಜಾರ್ಜ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಎರ್ಮೂರು ದಿನಗಳಿಂದ ಶಾಸಕರು, ಸಚಿವರು ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡುತ್ತಿದ್ದಾರೆ. ಆದರೆ, ಡಿಕೆಶಿ ಮಾತ್ರ ಇಂದು ಜಾರ್ಜ್ ಅವರನ್ನು ಭೇಟಿ ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಜಾರ್ಜ್ ಪವರ್ ಸೆಂಟರ್ ಆದ್ರಾ ಎಂಬ ಪ್ರಶ್ನೆಗಳು ಉದ್ಭವಿಸಿವೆ.