
ಕನಕಪುರ, ನವೆಂಬರ್ 25: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾಣದ ತಂತ್ರ ಒಂದುಕಡೆಯಾದರೆ ಡಿಸಿಎಂ ಡಿಕೆಶಿ ಬಣದ ಪ್ರತಿತಂತ್ರ ಮತ್ತೊಂದೆಡೆ ರೆಡಿಯಾಗ್ತಿದೆ. ಈ ನಡುವೆ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತಾ ನಾನು ಕೇಳಿಯೇ ಇಲ್ಲ. ಕನಕಪುರದಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನ ಹಸ್ತಾಂತರ ಐದಾರು ಜನರ ಗುಟ್ಟಿನ ವಿಚಾರ. ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರೋದಕ್ಕೆ ನನಗೆ ಇಷ್ಟವಿಲ್ಲ. ಪಕ್ಷ ಇದ್ದರೆ ನಾವೆಲ್ಲ ಪಕ್ಷವನ್ನು ನಾನು ವೀಕ್ ಹೊಂದಿದ್ದೇನೆ. ಸಿದ್ದರಾಮಯ್ಯ ಬಜೆಟ್ ಮಂಡಿಸ್ತೇನೆ ಅಂದಿದ್ದಾರೆ, ಮಂಡಿಸಲಿ. ಅವರು ವಿಪಕ್ಷ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೂಡ ದುಡಿದಿದ್ದಾರೆ. ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿಕೆಶಿ ಹೇಳಿದರು. ಜೊತೆಗೆ ರಾಯರೆಡ್ಡಿ, ಡಿವಿಎಸ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ನಾನು ಅವರ ವಕ್ತಾರ ಅಲ್ಲ ಎಂದು ಇದೆ ವೇಳೆ ತಿರುಗೇಟು ನೀಡಿದ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.