
ವಾಷಿಂಗ್ಟನ್, ಮಾರ್ಚ್ 23: ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮ ಗಲ್ಫ್ ರಾಷ್ಟ್ರಗಳೂ ಅನುಭವಿಸಿದವು. ಇದರ ಪರೋಕ್ಷ ಪರಿಣಾಮ ಭಾರತ ಸೇರಿದಂತೆ ಇತರ ದೇಶಗಳೂ ಅನುಭವಿಸಿದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.