ಸಾಮಾನ್ಯವಾಗಿ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ಆದರೆ ಬಾಯಿ ಮತ್ತು ಹೃದಯಕ್ಕೂ ಸಂಬಂಧವಿದೆ ಎಂಬುದು ನಿಮಗೆ ತಿಳಿದಿದೆ. ಹೌದು, ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಬಾಯಿಯ ಆರೋಗ್ಯವನ್ನು ಕಾಪಾಡುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಈ ಹಿರಿಯ ಸಲಹೆಗಾರ ಡಾ. ಅನುಪಮಾ ವಿ. ಹೆಗ್ಡೆ (ಡಾ. ಅನುಪಮಾ ವಿ. ಹೆಗಡೆ)ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತು ಅವರು ಹೆಚ್ಚಿನ ಮಾಹಿತಿಯನ್ನು ನೀಡಿದ್ದು, ದಂತದ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾದ ಮಾಹಿತಿ ಇದೆ. ಅವರು ಹೇಳುವ ಪ್ರಕಾರ, ನಾವು ಸೇವಿಸುವ ಆಹಾರದ ಜೀರ್ಣಕ್ರಿಯೆಗೆ ಅತ್ಯಗತ್ಯವಾಗುವುದರಿಂದ ಬಾಯಿಯ ಆರೋಗ್ಯ ಚೆನ್ನಾಗಿರುವುದು ಅತ್ಯಮೂಲ್ಯವಾಗಿದೆ. ಇಲ್ಲವಾದಲ್ಲಿ, ವಸಡಿನ ಸೋಂಕು, ಹಾನಿಕಾರಕ ರೋಗಾಣುಗಳು ಆಹಾರದ ಮೂಲಕ ದೇಹಕ್ಕೆ ಪ್ರವೇಶಿಸುತ್ತದೆ. ಈ ರೋಗಾಣುಗಳ ನಂತರ ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ, ಹೃದಯವನ್ನು ಸರಿಯಾಗಿಟ್ಟುಕೊಳ್ಳಲು ಬಾಯಿಯ ಆರೋಗ್ಯವನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು. ಈ ಬಗೆಗಿನ ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.