
ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಅಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಈ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರುವುದು ಬಹಳ ಮುಖ್ಯವಾದುದು. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯವೇ ಇಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ (ಡಾ. ಸಂತೋಷ್ ಎನ್.ಎಸ್) ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು ಸ್ಟ್ರೋಕ್ ಗಳಲ್ಲಿ ಕಂಡು ಬರುವ ವಿಧಗಳು ಮತ್ತು ಅವುಗಳಿಗೆ ಕಾರಣಗಳು ಸೇರಿದಂತೆ ಅವುಗಳ ಲಕ್ಷಣಗಳ ಬಗ್ಗೆ ವಿವರಿಸಿದ್ದು ಎಷ್ಟು ಗಂಟೆಯೊಳಗೆ ಸ್ಟ್ರೋಕ್ ಆದವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಬೇಕು ಎನ್ನುವುದರ ಬಗ್ಗೆ ಮಾತನಾಡಿದ್ದು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.