ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸುತ್ತಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್ ಕೂಡಲೆ ಅಂತರದಲ್ಲಿ ಬಾಲಕಿ ಬಚಾವ್ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್ ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್ಪಾತ್ಗೆ ಕಾರು ನುಗ್ಗಿದ ಪರಿಣಾಮ 7 ಜನರು ಕಾಣಿಸಿಕೊಂಡಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಸುನೀಲ್ ಕುಮಾರ್ ಸಿಂಗ್ ಮತ್ತು ಮಾಲ್ ಆಫ್ ಏಷ್ಯಾ ಆಡಳಿತ ಮಂಡಳಿ ವಿರುದ್ಧ ಸಂಜಯ್ ನಗರ ಸಂಚಾರಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.