ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ


ನೆಲಮಂಗಲ, ಡಿಸೆಂಬರ್ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ರೋಹಿತ್ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿ, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಬಳಿಕ ಹೋಗಿ ನೇಣಿನ ಕುಣಿಕೆಗೆ ಸಿಲುಕಿ ವಿಜಯ್ ಕಾಣಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಘಟನೆ ನಡೆದಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಲಿಫ್ಟ್ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆಯ ಮೇಲೆ ಸಾಮೂಹಿಕ ಅಚಾರ

ಇದೇ ರೀತಿ ಹಿಂದೆಯೂ ತಮಾಷೆ ಮಾಡಿದ್ದ ವಿಜಯ್

ವೃತ್ತಿಯಲ್ಲಿ ಲೆಕ್ಟೀಷಿಯನ್ ಆಗಿದ್ದ ವಿಜಯ್ ಕುಮಾರ್ ಗೆ ಮದುವೆ ಮಾಡಬೇಕೆಂದು ತಾಯಿ ಕನಸು ಕಂಡಿದ್ದರು. ಚೆನ್ನಾಗಿ ತಮಾಷೆಯಾಗಿ ಸ್ವಾಭಾವ ಹೊಂದಿದ್ದ ವಿಜಯ್ ಮದ್ಯಪಾನ ಮಾಡಿ ಬಂದಿದ್ದಕ್ಕೆ ತಾಯಿ ಬೈದಿದ್ದರು. ಆ ವೇಳೆ ಆಕೆಯನ್ನು ತಮಾಷೆಗೆ ಹೆದರಿಸಲು ಹೋಗಿ ವಿಜಯ್ ನೇಣಿನ ಕುಣಿಕೆಗೆ ಸಿಲುಕಿದ್ದು, ಮನೆಯವರಿಗೆ ಇದು ಗಮನಕ್ಕೆ ಬರುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿ ಹೋಗಿತ್ತು. ಹೆತ್ತವರ ಬಳಿ ಇದೆ ರೀತಿ ಹಲವು ಬಾರಿ ಈತ ತಮಾಷೆ ಮಾಡಿದ್ದು, ಸಾವಿನ ವಿಚಾರದಲ್ಲಿ ತಮಾಷೆ ಮಾಡಬೇಡ ಕಣೋ ಎಂದು ಹಲವು ಬಾರಿ ತಾಯಿಯೂ ವಿಜಯ್ ಗೆ ಬುದ್ಧಿ ಹೇಳಿದ್ದರು. ಆದರೂ ಅದೇ ಚಾಳಿ ಮುಂದುವರಿಸಿದ್ದ ಕಾರಣ ಈಗ ಮಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಲವತ್ತುಕೊಂಡಿದ್ದಾರೆ.

ವರದಿ: ಮಂಜುನಾಥ್, ಡಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *