ನಾಯಕಿಯಾಗಿ ಎಂಟ್ರಿ ಕೊಡಲಿರುವ ದುನಿಯಾ ವಿಜಿ ಪುತ್ರಿ: ನಾಯಕ ಯಾರು?

ನಾಯಕಿಯಾಗಿ ಎಂಟ್ರಿ ಕೊಡಲಿರುವ ದುನಿಯಾ ವಿಜಿ ಪುತ್ರಿ: ನಾಯಕ ಯಾರು?


ದುನಿಯಾ ವಿಜಯ್ (Duniya Vijay) ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ. ಅವರ ಇಬ್ಬರು ಪುತ್ರಿಯರು ಇದೀಗ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ದುನಿಯಾ ವಿಜಯ್ ಅವರ ಕಿರಿಯ ಪುತ್ರಿ ಮೋನಿಷಾ ಅವರು ವಿನಯ್ ರಾಜ್ ಕುಮಾರ್ ಜೊತೆಗೆ ‘ಸಿಟಿಲೈಟ್ಸ್’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿಜಿ ಅವರ ಪುತ್ರಿ ರಿತನ್ಯಾ ಅವರು ಮೊದಲ ತಂದೆಯ ಜೊತೆಗೆ ‘ಲ್ಯಾಂಡ್ ಲಾಾರ್ಡ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ ನಾಯಕಿಯಾಗಿ ಈಗ ಹೊಸ ಸಿನಿಮಾ ಮೂಲಕ ಅಧಿಕೃತವಾಗಿ ಎಂಟ್ರಿ ಕೊಡುತ್ತಿದ್ದಾರೆ.

‘ಯಲಾ ಕುನ್ನಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ದಳವಾಯ್ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ, ಸಿನಿಮಾಕ್ಕೆ ‘ಜವರ’ ಎಂದು ಹೆಸರಿಡಲಾಗಿದೆ. ಸಿನಿಮಾದಲ್ಲಿ ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಮೊದಲ ಪುತ್ರಿ ರಿತನ್ಯಾ ನಾಯಕಿಯಾಗಿ ನಟಿಸಲಿದ್ದಾರೆ. ಚಿದಾವೃಷಭ ಅವರು ನಿರ್ಮಾಣದ ಜವಾಬ್ದಾರಿ ವಹಿಸಿದ್ದಾರೆ.

‘ಜವರ’ ಸಿನಿಮಾದ ಮುಹೂರ್ತ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿದೆ. ಸ್ಮಶಾನದಲ್ಲಿ ಶವಗಳನ್ನು ಹೂಳುವ ಕೆಲಸ ಮಾಡುತ್ತಿರುವ ನೀಲಮ್ಮ ‘ಜವರ’ ಸಿನಿಮಾಕ್ಕೆ ಕ್ಲಾಪ್ ಮಾಡುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾದ ವಿಶೇಷ ಪಾತ್ರಗಳಲ್ಲಿ ಹಿರಿಯ ನಟ ರಂಗಾಯಣ ರಘು ಮತ್ತು ನಟಿ ಶ್ರುತಿ ಅವರು ನಟಿಸುತ್ತಿದ್ದಾರೆ. ಇವರ ಪಾತ್ರಗಳು ಸಹ ಸಿನಿಮಾದ ಪ್ರಮುಖ ಪಾತ್ರಗಳೇ ಆಗಿರಲಿವೆಯಂತೆ.

ಈ ಸಿನಿಮಾದಲ್ಲಿ ರಿತನ್ಯಾ ವಿಜಿ, ಭೂಮಿ ಹೆಸರಿನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ರಿತನ್ಯಾ, ‘ವೈದ್ಯಕೀಯ ವಿದ್ಯಾರ್ಥಿನಿ ಪಾತ್ರದಲ್ಲಿ ನಟಿಸಿದ್ದೇನೆ. ದೊಡ್ಡ ದೊಡ್ಡ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ ಅವರ ಜೊತೆ ನಟಿಸುತ್ತಿರುವುದು ತುಂಬಾ ಖುಷಿಯಾಗಿದೆ. ನಾನು ತುಂಬಾ ಅದೃಷ್ಟವಂತೆ ಎನಿಸುತ್ತದೆ, ಕಲಿಕೆಗೆ ಸಾಕಷ್ಟು ಅವಕಾಶವಿದೆ’ ಎಂದು ಹೇಳಿದರು.

ಇದನ್ನೂ ಓದಿ:ತಮಿಳು ಸಿನಿಮಾ ಚಿತ್ರೀಕರಣ ಮುಗಿಸಿದ ದುನಿಯಾ ವಿಜಯ್: ವಿಡಿಯೋ

ರಂಗಾಯಣ ರಘು ಈ ಸಿನಿಮಾದಲ್ಲಿ ಗೌರಿ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಮಾತನಾಡಿದ ರಂಗಾಯಣ ರಘು ‘ಶ್ರುತಿ ಅವರ ಜೊತೆ ಮತ್ತೆ ನಟಿಸುತ್ತಿದ್ದೀನಿ. ಪಾತ್ರ ತುಂಬಾ ಅದ್ಭುತವಾಗಿದೆ. ಈ ಸಿನಿಮಾದಲ್ಲಿ ನಾನು ಇರುವ ಜಾಗ ತುಂಬಾ ಪ್ರಶಾಂತವಾಗಿರುತ್ತೆ, ಶಿವ ಇರುವ ಜಾಗವದು. ಅಂಥ ಅದ್ಭುತ ಪಾತ್ರದಲ್ಲಿ ನಟಿಸುತ್ತಿದ್ದೇನೆ’ ಎಂದು ಹೇಳಿದರು. ನಟಿ ಶ್ರುತಿ ರಾಯಲ್ ಮೀನಾಕ್ಷಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತನ್ನ ಪಾತ್ರದ ಬಗ್ಗೆ ತುಂಬಾ ಖುಷಿಯಾಗಿರುವ ಶ್ರುತಿ, ‘ಕಥೆ ತುಂಬಾ ಚೆನ್ನಾಗಿದೆ. ಬದುಕೆಲ್ಲ ಮುಗಿದ ಮೇಲೆ ಹೊರಡುವ ಜಾಗದಲ್ಲಿ ಇರ್ತೀನಿ’ ಎಂದಳು.

ನಟ ರಿ ರುದ್ರ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿ, ಕಥೆ ತುಂಬಾ ಇಷ್ಟವಾಯಿತು, ನಿರ್ದೇಶಕರು ಕಥೆ ಹೇಳಲು ಆಗಲೇ ಪರದೆಯ ಪ್ಲೇ ಕೂಡ ರೆಡಿಮಾಡಿಕೊಂಡರು. ಅದು ತುಂಬಾ ಇಷ್ಟ ಆಯ್ತು. ನಿರ್ದೇಶಕರು ತುಂಬಾ ಯೋಚಿಸಿ ಮಾಡಿರುವ ಕಥೆ ಇದು.ನಿರ್ದೇಶಕ ಎನ್ನಲು ಕ್ರಿಯೇಟಿವ್ ಹೆಡ್ ಎನ್ನಬಹುದು. ರಿತನ್ಯಾ ತುಂಬಾ ಚೆನ್ನಾಗಿ ನಟಿಸುತ್ತಾರೆ’ ಎಂದು ಹೇಳಿದರು.

ನಿರ್ದೇಶಕ ಪ್ರದೀಪ್ ಈ ಸಿನಿಮಾದಲ್ಲಿ ನಿರ್ದೇಶನದ ಜೊತೆಗೆ ಜಾಬ್ದಾರಿಯನ್ನು ವಹಿಸಿದ್ದಾರೆ. ಧರ್ಮ ವಿಶ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಯಲಾ ಕುನ್ನಿ ಸಿನಿಮಾದಲ್ಲೂ ನಿರ್ದೇಶಕ ಪ್ರದೀಪ್ ಮತ್ತು ಧರ್ಮವಿಶ್ ಒಟ್ಟಿಗೆ ಕೆಲಸ ಮಾಡಿದ್ದರು ಇದೀಗ ಜವರ ಸಿನಿಮಾದಲ್ಲೂ ಇಬ್ಬರ ಕಾಂಬಿನೇಷನ್ ಮುಂದುವರೆದಿರುವುದು ವಿಶೇಷ. ಹಾಲೇಶ್ ಕ್ಯಾಮರಾ ವರ್ಕ್ ಸಿನಿಮಾಗಿರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 4:48 pm, ಭಾನುವಾರ, 7 ಡಿಸೆಂಬರ್ 25



Source link

Leave a Reply

Your email address will not be published. Required fields are marked *