
ದುನಿಯಾ ವಿಜಯ್ (ದುನಿಯಾ ವಿಜಯ್), ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟಿಸಿದ್ದ ‘ಲ್ಯಾಂಡ್ ಲಾಾರ್ಡ್’ ಸಿನಿಮಾ ಇತ್ತೀಚೆಗಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ಕಂಡುಬಂದಿವೆ. ಕ್ರಾಂತಿಕಾರಿ ಕತೆಯನ್ನು ಹೊಂದಿದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದ ಈ ಸಿನಿಮಾ ಒಟಿಯಲ್ಲಿಯೂ ಸಹ ವೀಕ್ಷಿಸುವುದೇ ಎಂಬುದು ಕುತೂಹಲ ಮೂಡಿಸಿದೆ.
ಜನವರಿ 23 ರಂದು ಚಿತ್ರಮಂದಿರಗಳಲ್ಲಿ ‘ಲ್ಯಾಂಡ್‌ಲಾಾರ್ಡ್’ ಸಿನಿಮಾ ಬಿಡುಗಡೆಯಾಗಿದೆ. ಜಾತಿ ಪದ್ಧತಿ, ಜೀತ ಪದ್ಧತಿಗಳ ವಿರುದ್ಧ ಹೋರಾಟದ ಕಥೆ ಈ ಸಿನಿಮಾ ಇತ್ತು. ಸಿನಿಮಾದಲ್ಲಿ ದುನಿಯಾ ವಿಜಯ್ ಭಿನ್ನ ರೀತಿಯ ಪಾತ್ರದಲ್ಲಿ ನಟಿಸಿದ್ದರು. ತುಸು ವಯಸ್ಸಾದ ಆದರೆ ಖಡಕ್ ಆದ ಪಾತ್ರದಲ್ಲಿ ದುನಿಯಾ ವಿಜಯ್ ನಟಿಸಿದ್ದರು. ನಾಯಕಿ ಪಾತ್ರದಲ್ಲಿ ನಟಿಸಿದ್ದ ರಚಿತಾ ರಾಮ್ ಸಹ ವಯಸ್ಸಾದ ಮಹಿಳೆಯ ಪಾತ್ರದಲ್ಲಿ ನಟಿಸಿದ್ದು ವಿಶೇಷವಾಗಿತ್ತು. ದುನಿಯಾ ವಿಜಯ್ ಪುತ್ರಿ ರಿತನ್ಯ ಸಹ ಈ ಸಿನಿಮಾದಲ್ಲಿ ಮಹತ್ವದ ಪಾತ್ರದಲ್ಲಿ ನಟಿಸಿದ್ದರು. ರಾಜ್ ಬಿ ಶೆಟ್ಟಿ ವಿಲನ್ ಪಾತ್ರದಲ್ಲಿ ನಟಿಸಿದ್ದರು.
‘ಲ್ಯಾಂಡ್‌ಲಾರ್ಡ್’ ಸಿನಿಮಾವು ಜೀ5 ಒಟಿಟಿಯಲ್ಲಿ ಮಾರ್ಚ್ 13 ರಂದು ಬಿಡುಗಡೆಯಾಗಲಿದೆ. ಮತ್ತೊಂದು ಪ್ರಕಾರ, ಯುಗಾದಿ ಹಬ್ಬದ ವರದಿಗೆ ಅಂದರೆ ಮಾರ್ಚ್ 18ಕ್ಕೆ ಈ ಸಿನಿಮಾ ಒಟಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದಾಗ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಸಿಕ್ಕಿತ್ತು, ಖುದ್ದು ಸಿಎಂ ಸಿದ್ದರಾಮಯ್ಯ ಅವರ ಸಿನಿಮಾವನ್ನು ಚಿತ್ರಮಂದಿರದಲ್ಲಿ ವೀಕ್ಷಿಸಿ, ಸಿನಿಮಾದ ಬಗ್ಗೆ ಒಳ್ಳೆಯ ಮಾತುಗಳನ್ನು ಹಂಚಿಕೊಂಡಿದ್ದರು. ಇದೀಗ ಈ ಸಿನಿಮಾ ಒಟಿಟಿಗೆ ಬರುತ್ತಿದೆ.
ಇದನ್ನೂ ಓದಿ:ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
‘ಲ್ಯಾಂಡ್‌ಲಾಾರ್ಡ್’ ಸಿನಿಮಾದಲ್ಲಿ ದುನಿಯಾ ವಿಜಯ್ ಜೊತೆಗೆ ರಚಿತಾ ರಾಮ್, ರಾಜ್ ಬಿ ಶೆಟ್ಟಿ, ಉಮಾಶ್ರೀ ಅವರು ನಟಿಸಿದ್ದರು. ದುನಿಯಾ ವಿಜಯ್ ಪುತ್ರಿ ರಿತನ್ಯ, ಸಿನಿಮಾದಲ್ಲಿಯೂ ಸಹ ದುನಿಯಾ ವಿಜಯ್ ಪಾತ್ರದ ಪುತ್ರಿಯ ಪಾತ್ರದಲ್ಲಿ ನಟಿಸಿದ್ದರು. ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾದ ಮೂಲಕ ಗಮನ ಸೆಳೆದಿದ್ದ ಸಿರೀಶ್ ಬೈಕಾಡಿ ಸಹ ಈ ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ, ಯುಗಾದಿ ಸಮಯದಲ್ಲಿ ಟಿವಿಯಲ್ಲಿ ಪ್ರದರ್ಶನ ಆಗಲಿದೆ ಎನ್ನಲಾಗುತ್ತಿದೆ.
ದುನಿಯಾ ವಿಜಯ್ ಪ್ರಸ್ತುತ ಇನ್ನೂ ಕೆಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮಿಳಿನ ‘ಮೂಕುತ್ತಿ ಅಮ್ಮನ್ 2’, ತೆಲುಗಿನಲ್ಲಿ ಪುರಿ ಜಗನ್ನಾಥ್ ನಿರ್ದೇಶನ, ವಿಜಯ್ ಸೇತುಪತಿ ನಟಿಸುತ್ತಿರುವ ‘ಸ್ಲಾಮ್ ಡಾಗ್: 33 ಟೆಂಪಲ್ ರೋಡ್’ ಸಿನಿಮಾ, ಅವರದ್ದೇ ನಿರ್ದೇಶನದ ‘ಸಿಟಿಲೈಟ್ಸ್’, ಸೂರಿ ನಿರ್ದೇಶನದ ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಸಿಟಿಲೈಟ್ಸ್’ ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ನಾಯಕರಾಗಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ