ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (APSRTC) ಸೇರಿದ ಬಸ್‌ವೊಂದು ಶಿವಾನಂದ ಸರ್ಕಲ್ ಬಳಿ ಅಪಘಾತಕ್ಕೀಡಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ವೇಗವಾಗಿ ಬಂದ ಆಂಧ್ರ ಸಾರಿಗೆ ಸಂಸ್ಥೆ ಸೇರಿದ ಬಸ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗದ ಚಕ್ರ ಹಾಗೂ ಇಂಜಿನ್ ಭಾಗಗಳು ಕಿತ್ತುಬಂದಿವೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತಕ್ಕೀಡಾದ ಸಾರಿಗೆ ಬಸ್ ಆಂಧ್ರಪ್ರದೇಶದ ಅಧೋನಿಯಿಂದ ಹೊರಟು ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿತ್ತು. ಬೆಳಗಿನ ಜಾವ ರಸ್ತೆಗಳು ಖಾಲಿ ಇದ್ದ ಕಾರಣ ಬಸ್ ವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಶಿವಾನಂದ ಸರ್ಕಲ್ ತಲುಪುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ.

ಭೀಕರ ಅಪಘಾತದಲ್ಲಿ, ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಪ್ರಾಣಹಾನಿ ಸಂಭವಿಸದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಡಿವೈಡರ್ ಮೇಲೆ ಸಿಲುಕಿಕೊಂಡಿರುವ ಬಸ್ಸನ್ನು ಕ್ರೇನ್ ಸಹಾಯದಿಂದ ಹೊರತೆಗೆಯಲು ಕಾರ್ಯಾಚರಣೆ ನಡೆಸಿದರು. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಸುಗಮ ಸಂಚಾರಕ್ಕೆ ತೊಂದರೆಯಾದರೂ ಬೆಳಗಿನ ಜಾವ ಆದ ಕಾರಣ ರಸ್ತೆ ವಾಹನಗಳಿಂದ ಟ್ರಾಫಿಕ್ ಆಗುವ ಮಟ್ಟಕ್ಕೆ ಹೆಚ್ಚಿರಲಿಲ್ಲ.

ಡಿವೈಡರ್‌ನ ತೆಗೆಯುವ ಮೂಲಕ ಸಿಲುಕಿಕೊಂಡಿದ್ದ ಬಸ್ ಹೊರಗೆಳೆದ ಸಂಚಾರಿಪೊಲೀಸರು. ಸದ್ಯ ಅಪಘಾತಕ್ಕೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ ಸಂಬಂಧ ಟ್ರಾಫಿಕ್ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Source link
ಬೆಳ್ಳಂಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್!