ಬೆಂಗಳೂರು: ಎಂಜಿನಿಯರಿಂಗ್ ಸೀಟ್‌ಗೂ ಲಂಚ, PSI ನೇಮಕಕ್ಕೂ ಡೀಲ್: ಬರೋಬ್ಬರಿ 21 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ

ಬೆಂಗಳೂರು: ಎಂಜಿನಿಯರಿಂಗ್ ಸೀಟ್‌ಗೂ ಲಂಚ, PSI ನೇಮಕಕ್ಕೂ ಡೀಲ್: ಬರೋಬ್ಬರಿ 21 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ


ಇಂಜಿನಿಯರಿಂಗ್ ಸೀಟ್ ಬ್ಲಾಕ್, PSI ನೇಮಕಾತಿ ಹಗರಣದಲ್ಲಿ ಇಡಿ ಶಾಕ್!

ಬೆಂಗಳೂರು, ಜನವರಿ 25: ಬೆಂಗಳೂರಿನ ಖ್ಯಾತ ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ (ಸೀಟ್ ಬ್ಲಾಕಿಂಗ್) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅದಲ್ಲದೆ ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್‌ಐಗಳು (ಪಿಎಸ್ಐ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಇಡಿ 1.53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

18 ಸ್ಥಳಗಳಲ್ಲಿ ಇಡಿ ದಾಳಿ

ಇಂಜಿನಿಯರಿಂಗ್ ಪ್ರವೇಶ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕರ್ನಾಟಕ ಪ್ರಾಧಿಕಾರ (ಕೆಇಎ) ದೂರು ನೀಡಿದ್ದು, ಮಲ್ಲೇಶ್ವರಂ ಹಾಗೂ ಹನುಮಂತನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪ್ರತ್ಯೇಕವಾಗಿ ಕೇಸ್ ದಾಖಲಿಸಿಕೊಂಡ ಇಡಿ ತನಿಖೆ ಆರಂಭಿಸಿತ್ತು. 2025 ರಲ್ಲಿ ಬಿಎಂಎಸ್ ಟ್ರಸ್ಟ್ ಸದಸ್ಯರು, ಎಂಜಿನಿಯರಿಂಗ್ ಕಾಲೇಜುಗಳು, ಮಧ್ಯವರ್ತಿಗಳು ಮತ್ತು ಏಜೆಂಟರ ಮನೆಗಳು ಸೇರಿ 18 ಸ್ಥಳಗಳಲ್ಲಿ ಇಡಿ ದಾಳಿ ನಡೆಸಲಾಯಿತು.

ನಿಗದಿತ ಶುಲ್ಕಕ್ಕಿಂತ 10 ಪಟ್ಟು ಹೆಚ್ಚು ದರಕ್ಕೆ ಸೀಟ್‌ಗಳ ಮಾರಾಟ

ತನಿಖೆಯಲ್ಲಿ ಬಿಎಂಎಸ್ ಟ್ರಸ್ಟ್ ನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೀಟ್ ಬ್ಲಾಕಿಂಗ್ ನಡೆಯುತ್ತಿದೆ. ಕಾಲೇಜು ಆಡಳಿತ ಮಂಡಳಿಯವರು ಹಾಗೂ ಏಜೆಂಟರ ಮೂಲಕ ವಿದ್ಯಾರ್ಥಿಗಳಿಂದ ನೇರವಾಗಿ ಮತ್ತು ಶೈಕ್ಷಣಿಕ ಸಲಹೆಗಾರರ ​​ಮೂಲಕ ಹಣ ಸಂಗ್ರಹಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಈ ಹಣವನ್ನು ಟ್ರಸ್ಟ್‌ನ ಲೆಕ್ಕಪತ್ರಗಳಲ್ಲಿ ದಾಖಲಿಸಲಾಗಿದೆ, ಸೀಟ್‌ಗಳನ್ನು ನಿಗದಿತ ಶುಲ್ಕಕ್ಕಿಂತ 10 ಪಟ್ಟು ಹೆಚ್ಚು ದರಕ್ಕೆ ಮಾರಾಟ ಮಾಡಿರುವುದು. ಈ ಅಕ್ರಮದಿಂದ ಸುಮಾರು 20 ಕೋಟಿ ರೂ. ಸಂಗ್ರಹದ ಸಾಕ್ಷ್ಯ ದೊರೆತಿದ್ದು, ದಾಳಿ ವೇಳೆ 1.86 ಕೋಟಿ ರೂ. ನಗದುಕೂಡ ಇತ್ತು. ಅಕ್ರಮ ಹಣವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿ ಆಸ್ತಿ ಖರೀದಿಸಲಾಗಿದೆ 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಇದೀಗ ಮುಟ್ಟುಗೋಲು ಹಾಕಿಕೊಂಡಿದೆ.

ಆಸ್ತಿ ಮುಟ್ಟಗೋಲಿನ ಕುರಿತು ಎಕ್ಸ್ ಖಾತೆಯಲ್ಲಿ ಇಡಿ ಪೋಸ್ಟ್

ಇದನ್ನೂ ಓದಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ: ಕೋಟ್ಯಾಂತರ ರೂ. ಹಣ, ಮಹತ್ವದ ದಾಖಲೆಗಳು ಇಡಿ ವಶಕ್ಕೆ

ಪ್ರತಿ ಅಭ್ಯರ್ಥಿಯಿಂದ 70 ಲಕ್ಷ ರೂ ಪಡೆದ ಅಧಿಕಾರಿಗಳು!

2021–22ರಲ್ಲಿ ನಡೆದ 545 ಪಿಎಸ್‌ಐಗಳ ನೇಮಕಾತಿ ಹಗರಣ ನಡೆದ ಸಂದರ್ಭದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಹಾಗೂ ಹೆಡ್ ಕಾನ್ಸಟೇಬಲ್ ಎಚ್. ಶ್ರೀಧರ್ ಅವರಿಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮತ್ತು ಪ್ರಕರಣ ದಾಖಲಾಗಿದ್ದು, ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಡಿ ತನಿಖೆಯಲ್ಲಿ, ಸಂಭಾವ್ಯ ಪಟ್ಟಿ ಪ್ರಕಟವಾದ ನಂತರ ಅಭ್ಯರ್ಥಿಗಳ OMR ಶೀಟ್‌ಗಳನ್ನು ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ. ಎಡಿಜಿಪಿ ಕಚೇರಿಯಲ್ಲಿ ಇರಿಸಿದ್ದ ಅಲ್ಮೆರಾದ ಕೀಲಿಗಳನ್ನು ಅಮೃತ್ ಪೌಲ್ ಅವರು ಡಿವೈಎಸ್ ಪಿ ಶಾಂತಕುಮಾರ್ ಅವರಿಗೆ ನೀಡಿದ್ದು, ಶಾಂತಕುಮಾರ್ ಹಾಗೂ ಹೆಚ್. ಶ್ರೀಧರ್ ಸೇರಿ OMR ಶೀಟ್‌ಗಳನ್ನು ತಿದ್ದಿದ್ದಾರೆ ಎಂಬ ಆರೋಪವಿದೆ.

ಈ ಅಕ್ರಮಕ್ಕಾಗಿ ಪ್ರತಿ ಅಭ್ಯರ್ಥಿಯಿಂದ 30 ಲಕ್ಷದಿಂದ 70 ಲಕ್ಷ ರೂ.ಗಳವರೆಗೆ ಲಂಚ ಪಡೆಯಲಾಗಿದೆ, ಹಣವನ್ನು ಆರೋಪಿಗಳು ತಮ್ಮ ಡೈರಿ ಮತ್ತು ಲೆಕ್ಕಪತ್ರಗಳಲ್ಲಿ ಕೈಸಾಲ ಎಂದು ದಾಖಲಿಸಿದ್ದಾರೆ. ಬಳಿಕ ಈ ಅಕ್ರಮ ಹಣ ಮನೆಗಳ ನಿರ್ಮಾಣ ಸೇರಿದಂತೆ ವೈಯಕ್ತಿಕ ಉದ್ದೇಶಗಳಿಗಾಗಿ ಬಳಸಿಕೊಂಡ ಇಡಿ ತನಿಖೆಯಲ್ಲಿದೆ. ಅಕ್ರಮ ಹಣ ವರ್ಗಾವಣೆ ನಡೆದಿರುವುದು ದೃಢಪಟ್ಟ ಹಿನ್ನೆಲೆ, ಆರೋಪಿಗಳಿಗೆ ಸೇರಿದ 1.53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *