ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್


ಹಾವೇರಿ, (ಮಾರ್ಚ್ 02): ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪ ತೋರಿದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ (ಶಿಕ್ಷಣ ಇಲಾಖೆ) ಅಮಾನತುಗೊಳಿಸಿದೆ. ಶನಿವಾರ (ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೆಬೆನ್ನೂರಿನ (ರಾಣೆಬೆನ್ನೂರು) ಬಿಜೆಎಸ್ ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಟಿವಿ9′ ಸುದ್ದಿ ಬಿತ್ತರಿಸಿತ್ತು. ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿ.ಯನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪ ತೋರಿದ್ದರು. ಜೊತೆಗೆ ಆಡಳಿತ ಮಂಡಳಿ ಪರವಾಗಿ ಮಾತನಾಡಿದ್ದು, ಹಸ್ತಕ್ಷೇಪ ಇರುವುದು ಕಂಡುಬಂದಿದೆ. ತನಿಖೆ ಮಾಡಿದ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ ದಂಡಿನ ಅವರು ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ್ ಅಡಿಗರಿಂದ ಸೂಕ್ತಕ್ರಮಕ್ಕಾಗಿ ಶಿಪಾರಸ್ಸು ಮಾಡಿದ ಪತ್ರದವಯ ಅಮಾನತು ಆದೇಶವನ್ನು ಮಾಡಿದ್ದಾರೆ.

ಇದನ್ನೂ ಓದಿ: ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು

ಪ್ರಕರಣದ ಹಿನ್ನೆಲೆ

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದು ಖಾಸಗಿ ಕಾಲೇಜಿನ ಪರವಾಗಿ ದರ್ಪದ ಮಾತುಗಳನ್ನಾಡಿದ್ದರು.

ಹಾಲ್ ಟಿಕೆಟ್ ನೀಡುವಂತೆ ಸಾಮಾಜಿಕ ಹೋರಾಟಗಾರ ಹನುಮಂತಪ್ಪ ವಿದ್ಯಾರ್ಥಿನಿ ಪರವಾಗಿ ಬಂದಿದ್ದು, ಈ ವೇಳೆ ಹನುಮಂತಪ್ಪ ಮೇಲೂ ದರ್ಪ ತೋರಿದ್ದಾರೆ. ಹಾಗೇ ಹನುಮಂತಪ್ಪನ ಬೈಕ್ ಕೀ ಮತ್ತು ಮೊಬೈಲ್ ಕಿತ್ತುಕೊಂಡು ಹಾಲ್ ಟಿಕೆಟ್ ನೀಡಿದ್ದರು. ಹೀಗೆ ಖಾಸಗಿ ಕಾಲೇಜು ಪರವಾಗಿ ವಕಾಲತ್ತು ವಹಿಸಿ ಸಾರ್ವಜನಿಕರ ಜೊತೆಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಅಮಾನತು ಮಾಡಲಾಯಿತು.

ವರದಿ: ಅಣ್ಣಪ್ಪ ಬಾರ್ಕಿ ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 4:35 pm, ಸೋಮ, 2 ಮಾರ್ಚ್ 26



Source link

Leave a Reply

Your email address will not be published. Required fields are marked *