
ಬೆಂಗಳೂರು, ಮಾ.24: ವಿಧಾನಸಭೆಯ ಅಧಿವೇಶನದಲ್ಲಿ ಇಂದು ಶಿಷ್ಟಾಚಾರದ ಉಲ್ಲಂಘನೆಯ ವಿಷಯ ಭಾರಿ ಚರ್ಚೆಗೆ ಕಾರಣವಾಯಿತು. ಚುನಾಯಿತ ಶಾಸಕರನ್ನು ಕಡೆಗಣಿಸಿ, ಪರಾಜಿತ ಅಭ್ಯರ್ಥಿಗಳಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂಬ ಆರೋಪ ಸದನದಲ್ಲಿ ಪ್ರತಿಧ್ವನಿಸಿತು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. “ನಾನು ಬಂಟ್ವಾಳದ ಶಾಸಕರಿಗೆ ಗೊತ್ತೇ ಇಲ್ಲ. ಮಾಜಿ ಸಚಿವ ರಮಾನಾಥ್ ರೈ ಅವರ ಅಧಿಕಾರಿಗಳು ಇನ್ನೂ ಭಾವಿಸಿದ್ದಾರೆ. ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಮಾಜಿ ಶಾಸಕರ ಹೆಸರನ್ನು ಬಳಸಲಾಗುತ್ತಿದೆ. ಜೊತೆಗೆ, ಕಾಮಗಾರಿ ಏಜೆನ್ಸಿಗಳನ್ನು ಗುರುತಿಸುವಂತೆ ಮಾಜಿ ಶಾಸಕರು ಪತ್ರ ಬರೆಯುತ್ತಿದ್ದಾರೆ,” ಎಂದು ರಾಜೇಶ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದರು.
“ಸರ್ಕಾರಿ ಆದೇಶದ ಮಂಜೂರಾತಿ ನೀಡುವಾಗ ಶಿಷ್ಟಾಚಾರದ ಉಲ್ಲಂಘನೆ ಆಗುತ್ತಿಲ್ಲವೇ? ಪರಾಜಿತ ಅಭ್ಯರ್ಥಿಗಳ ಹೆಸರಿನಲ್ಲಿ ಅಧಿಕಾರಿಗಳು ಹಣ ಮಂಜೂರು ಮಾಡುತ್ತಿದ್ದಾರೆ ಎಂದರೆ ಅರ್ಥವೇನು? ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಪರಾಜಿತ ಅಭ್ಯರ್ಥಿಗಳ ಶಿಫಾರಸಿನ ಮೇಲೆ ಪತ್ರ ಬರೆಯುತ್ತಿವೆ. ಹೀಗಾದರೆ ಶಾಸಕರ ಬೆಲೆ ಎಲ್ಲಿದೆ? ಇದು ಶಾಸಕರ ಹಕ್ಕುಚ್ಯುತಿಯಲ್ಲವೇ?” ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ: ಅಜಿತ್ ಪವಾರ್ ವಿಮಾನ ಅಪಘಾತವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು
“ನನ್ನ ಕ್ಷೇತ್ರದಲ್ಲೂ ಇದೇ ಪರಿಸ್ಥಿತಿ ಇದೆ. ಪರಾಜಿತ ಅಭ್ಯರ್ಥಿಯ ಪತ್ರದ ಆಧಾರದ ಮೇಲೆ ಹಣ ಬಿಡುಗಡೆಯಾಗುತ್ತಿದೆ?” ಶಾಸಕರು ಕೇವಲ ಹೆಸರಿಗಷ್ಟೇ ಇರಬೇಕೇ? ಎಂದು ಪ್ರಶ್ನಿಸಿದರು.ಈ ವಿಷಯದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಡುವೆ ತೀವ್ರ ವಾಗ್ವಾದ ನಡೆಯಿತು. ಎಲ್ಲ ಕ್ಷೇತ್ರಗಳಲ್ಲಿ ಪರಾಜಿತ ಅಭ್ಯರ್ಥಿಗಳು ಪಾಲ್ಗೊಳ್ಳುತ್ತಿರುವುದು ವಿರೋಧ ಪಕ್ಷದ ಶಾಸಕರ ಒಮ್ಮತದ ಆರೋಪವಾಗಿತ್ತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ