ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ


ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಬ್ಯಾಲೆಟ್ ಪೇಪರ್ಗಳ ಮೂಲಕ ನಡೆಸಲು ನಿರ್ಧರಿಸಲಾಗಿದೆ. ಮೇ 25 ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಜೊತೆಗೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆ, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ. ಇವಿಎಂ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ಮೂಡಿರುವ ನಂಬಿಕೆಗೆ ಇದು ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ಕಾಂಗ್ರೆಸ್ ಪಕ್ಷವು ಇವಿಎಂ ಕುರಿತು ಆರೋಪಗಳನ್ನು ಮಾಡುತ್ತಿದೆ, ಈ ನಿರ್ಧಾರವು ಪುಷ್ಟಿ ನೀಡಿದಂತಾಗಬಹುದು ಎಂಬ ಚರ್ಚೆ ನಡೆಯುತ್ತಿದೆ. ಹಿಂದಿನ ಬಿಬಿಎಂಪಿ ಚುನಾವಣೆಗಳಲ್ಲಿ ಇವುಗಳನ್ನು ಬಳಸಲಾಗಿದೆ ಎಂಬ ಅಂಶವೂ ಗಮನಾರ್ಹವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *