ಕೇಂದ್ರದ ಅರಣ್ಯ ಸಚಿವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ
ನವದೆಹಲಿ, ಫೆಬ್ರುವರಿ 04: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆಯ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ಈ ಭೇಟಿಯ ವೇಳೆ ಕುಮಾರಸ್ವಾಮಿ ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದ ಆನೆಗಳ ದಾಳಿ ಕುರಿತು ಚರ್ಚೆ ನಡೆದಿದೆ.
ಈ ವೇಳೆ ಮಾತನಾಡಿದ ಹೆಚ್ಡಿಕೆ, ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕರು, ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗುತ್ತಾರೆ. ಇನ್ನೂ ಅನೇಕರು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಕುಮಾರಸ್ವಾಮಿ ಅವರು ಭೂಪೇಂದ್ರ ಯಾದವ್ ಅವರಿಗೆ ವಿನಂತಿಸಿದರು.
ಕುಮಾರಸ್ವಾಮಿ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ, ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪೂರಕವಾದವು. ಜೊತೆಗೆ, ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದರ ಕುರಿತು ನಿರ್ದೇಶನ ನೀಡಲಾಗಿದೆ.
ಪ್ರಸ್ತುತ ಸಂಸತ್ತಿನ ಬಜೆಟ್ ಅಧಿವೇಶನ ಮುಗಿಯುವವರೆಗೆ ಈ ಬಗ್ಗೆ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಲಾಗುತ್ತದೆ.
ಅಂತರ್ ಸಚಿವಾಲಯ ವಿಷಯಗಳ ಕುರಿತು ಸಮಾಲೋಚನೆ
ಈ ಭೇಟಿಯ ಸಂದರ್ಭದಲ್ಲಿ ಸಚಿವದ್ವಯರು ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜೊತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆದಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.