
ಬೆಂಗಳೂರು, ಮಾ.28: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಂದ್ಯದ ಆರಂಭಕ್ಕೂ ಮುಂಚೆಯೇ ಕ್ರೀಡಾಂಗಣದತ್ತ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ಹೊಸ ವ್ಯವಸ್ಥೆಗಳನ್ನು ತರಲಾಗಿದೆ. ಪಂದ್ಯಕ್ಕೆ ಒಟ್ಟು 2000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ನಿಯೋಜಿಸಲಾಗಿದೆ. ಐದು ಡಿಸಿಪಿಗಳು ಮತ್ತು ಜಂಟಿ ಸಿಪಿ ನೇತೃತ್ವದಲ್ಲಿ ಇಡೀ ಬಂದೋಬಸ್ತ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಕ್ರೀಡಾಂಗಣದಲ್ಲಿ ಸುವ್ಯವಸ್ಥೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಪ್ರವೇಶ ದ್ವಾರಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಈ ಬಾರಿ ಕಬ್ಬನ್ ರೋಡ್ ಕಡೆಯಿಂದ ಗರಿಷ್ಠ ಗೇಟ್ಗಳನ್ನು ತೆರೆಯಲಾಗಿದೆ, ಕ್ವೀನ್ಸ್ ರೋಡ್ ಕಡೆಯಿಂದ ಸಾರ್ವಜನಿಕರ ಪ್ರವೇಶವನ್ನು ನಿಲ್ಲಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಸೈಟ್ ಅನ್ನು ಪ್ರವೇಶಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಜನದಟ್ಟಣೆ ತಪ್ಪಿಸಲು, ಹಿಂದಿನ ವರ್ಷದಿಂದ ನಾಲ್ಕು ಗಂಟೆಗಳ ಮೊದಲೇ ಗೇಟ್ಗಳನ್ನು ತೆರೆಯಲಾಗುತ್ತಿದೆ. ಪ್ರತಿ ಗೇಟ್ನಲ್ಲಿ ಒಂದೇ ಸಮಯದಲ್ಲಿ ಐದರಿಂದ ಆರು ಜನರನ್ನು ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಇದು ಫುಟ್ಪಾತ್ಗಳಲ್ಲಿ ಜನಸಂದಣಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಭದ್ರತಾ ಕ್ರಮಗಳ ಭಾಗವಾಗಿ, ಎಲ್ಲಾ ಗೇಟ್ಗಳಲ್ಲಿ ಪಿಎ (ಪಬ್ಲಿಕ್ ಅಡ್ರೆಸ್) ಸಿಸ್ಟಮ್ಗಳನ್ನು ಅಳವಡಿಸಲಾಗಿದೆ. ಇದರ ಮೂಲಕ ಜನರಿಗೆ ಅಗತ್ಯ ಮಾಹಿತಿಯನ್ನು ನೀಡಲಾಗುತ್ತಿದೆ. ಜೊತೆಗೆ, ಕಳೆದ ಒಂದು ವಾರದಿಂದ ಪೊಲೀಸ್ ಇಲಾಖೆ, ತಂಡದ ಆಡಳಿತ ಮಂಡಳಿ ಮತ್ತು ಕೇಂದ್ರದ ವತಿಯಿಂದ ಸಾಮಾಜಿಕ ಮಾಧ್ಯಮಗಳ ಮೂಲಕವೂ ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಟಿಕೆಟ್ ಕುರಿತು ಪ್ರಮುಖ ಎಚ್ಚರಿಕೆಗಳನ್ನು ನೀಡಲಾಗಿದೆ. ಈ ವರ್ಷ ಯಾವುದೇ ರೀತಿಯ ಭೌತಿಕ ಟಿಕೆಟ್ಗಳ ಮಾರಾಟವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಅಥವಾ ಅಧಿಕೃತವಲ್ಲದ ಮೂಲಗಳಿಂದ ಟಿಕೆಟ್ಗಳು ಲಭ್ಯವಿವೆ ಎಂಬ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಯಾವುದೇ ವದಂತಿಗಳನ್ನು ನಂಬದಂತೆ ಅಭಿಮಾನಿಗಳಿಗೆ ಸೂಚಿಸಲಾಗಿದೆ. ಟಿಕೆಟ್ಗಳು ಮುಗಿದು ಮೂರು ದಿನ ನಿಗದಿ. ಅಧಿಕೃತ ಟಿಕೆಟಿಂಗ್ ಪ್ಲಾಟ್ಫಾರ್ಮ್ಗಳ ಮೂಲಕ ಮಾತ್ರ ಟಿಕೆಟ್ಗಳನ್ನು ಪಡೆಯಬೇಕು ಎಂದು ತಿಳಿಸಲಾಗಿದೆ. ಟಿಕೆಟ್ ಇಲ್ಲದ ಕ್ರಿಕೆಟ್ ಪ್ರೇಮಿಗಳು ಕ್ರೀಡಾಂಗಣದ ಬಳಿಗೆ ಬರದಂತೆ, ತಮ್ಮ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮನೆಯಲ್ಲೇ ಪಂದ್ಯವನ್ನು ವೀಕ್ಷಿಸುವಂತೆ ಮನವಿ ಮಾಡಿದರು. ಇದರಿಂದ ವಂಚನೆಗೆ ಒಳಗಾಗುವುದು ತಪ್ಪುತ್ತದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ