ಹಾವೇರಿ, ಮಾರ್ಚ್ 05: ಎಥೆನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿ ಹಲಗೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಯಿಂದ ಸರ್ವೀಸ್ ರಸ್ತೆಗೆ ಟ್ಯಾಂಕರ್ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿ, ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.