Headlines

ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್

ಇದು ಬಾಂಗ್ಲಾದೇಶದ 2ನೇ ವಿಮೋಚನೆ: 2024ರ ದಂಗೆಯನ್ನು ಹೊಗಳಿದ ಬಿಎನ್​ಪಿ ನಾಯಕ ತಾರಿಖ್ ರಹಮಾನ್


ಬಾಂಗ್ಲಾ ಹಂಗಾಮಿ ಪಿಎಂ ಜೊತೆ ತಾರಿಖ್ ರಹಮಾನ್

ಧಾಕಾ, ಡಿಸೆಂಬರ್ 25: ಹದಿನೇಳು ವರ್ಷದ ಹಿಂದೆ ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ಬಾಂಗ್ಲಾದೇಶ ಬಿಟ್ಟು ಹೊರದೇಶಕ್ಕೆ ಹೋಗಿದ್ದ ತಾರಿಖ್ ರಹಮಾನ್ ಇದೀಗ ತವರಿಗೆ ವಾಪಸ್ ಬಂದಿದ್ದು, ಚುನಾವಣೆಗೆ ರಹದಾರಿಗಳನ್ನು ಮೊಳಗಿಸುತ್ತಿದ್ದಾರೆ. 2024ರಲ್ಲಿ ಶೇಖ್ ಹಸೀನಾ (ಶೇಖ್ ಹಸೀನಾ) ಸರ್ಕಾರ ಪತನಗೊಳ್ಳಲು ಕಾರಣವಾದ ವಿದ್ಯಾರ್ಥಿ ನೇತೃತ್ವದ ಹೋರಾಟ ಹಾಗೂ ದಂಗೆಗಳನ್ನು ತಾರಿಖ್ ರಹಮಾನ್ (ತಾರಿಕ್ ರಹಮಾನ್) ಹೊಗಳಿದ್ಧಾರೆ. ಮಾಜಿ ಬಾಂಗ್ಲಾ ಪ್ರಧಾನಿ ಖಾಲಿದಾ ಜಿಯಾ (ಖಲೀದಾ ಜಿಯಾ) ಅವರ ಮಗನಾದ 60 ವರ್ಷದ ತಾರಿಖ್ ರಹಮಾನ್, ಬಾಂಗ್ಲಾಗೆ ಎರಡನೇ ಬಾರಿ ವಿಮೋಚನೆ ಆಗಿದೆ.

1971ರಲ್ಲಿ ಮೊದಲ ವಿಮೋಚನೆ ಆಯಿತು. ಈಗ 2024ರಲ್ಲಿ ಎರಡನೇ ಬಾರಿ ವಿಮೋಚನೆ ಆಗಿದೆ. 2024ರಲ್ಲಿ ಆಗಿದ್ದು ಜನರ ಹೋರಾಟ. ಇದು ದೇಶದ ಪ್ರಜಾತಾಂತ್ರಿಕ ಆಶಯಗಳನ್ನು ಮರಳಿ ಸ್ಥಾಪಿಸಿದೆ ಎಂದು ತಾರೀಕ್ ರಹಮಾನ್ ಪ್ರಯತ್ನ ಹೇಳಿದ್ದಾರೆ.

ಇದನ್ನೂ ಓದಿ: ಫಾಕ್ಸ್‌ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ

ಕಳೆದ ವರ್ಷ ಆರಂಭವಾದ ದಂಗೆಗಳ ಬಳಿಕ ಈಗ ಬಾಂಗ್ಲಾದೇಶದಲ್ಲಿ ಬಿಎನ್‌ಪಿ ಪಕ್ಷದ ಪರ ಅಲೆಯೆದ್ದಿದೆ ಎಂದು ಹೇಳಲಾಗುತ್ತಿದೆ. ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ಅಧ್ಯಕ್ಷೆ ಖಾಲಿದಾ ಜಿಯಾಗೆ 80 ವರ್ಷ ವಯಸ್ಸಾಗಿದೆ. ತಮ್ಮ ಮಗ ತಾರಿಖ್ ರಹಮಾನ್ ಗೆ ಪಕ್ಷದ ಚುಕ್ಕಾಣಿ ಬಿಟ್ಟುಕೊಡುವ ನಿರೀಕ್ಷೆ ಇದೆ. ಮುಂದಿನ ವರ್ಷ ನಡೆಯಲಿರುವ ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಗೆಲುವು ಸಾಧಿಸಿದರೆ ತಾರಿಖ್ ರಹಮಾನ್ ಅವರ ನೇತೃತ್ವದಲ್ಲೇ ಸರ್ಕಾರ ರಚನೆಯಾಗಬಹುದು ಎಂದು ಅಲ್ಲಿನ ರಾಜಕೀಯ ಪಂಡಿತರು ನಂಬಿದ್ದಾರೆ.

ಎಲ್ಲಾ ಸಮುದಾಯ ಮತ್ತು ಜನಾಂಗಗಳಿಗೆ ಸಮಾನ ಆದ್ಯತೆ

ಎಲ್ಲರನ್ನೂ ಒಳಗೊಳ್ಳುವ ಬಾಂಗ್ಲಾದೇಶದ ನಿರ್ಮಾಣ ಆಗಬೇಕು. ಅದರಲ್ಲಿ ಎಲ್ಲಾ ಸಮುದಾಯಗಳು ಮತ್ತು ಜನಾಂಗಗಳು ಭಾಗವಹಿಸಬೇಕು. ಏಕತೆ ಮತ್ತು ಸಮಾನತೆಯು ತಮ್ಮ ಪಕ್ಷದ ನೀತಿಯಲ್ಲಿ ಪ್ರಮುಖವಾಗಿದೆ. ತಮ್ಮ ಪಕ್ಷವ ದೇಶದ ಶಾಂತಿ, ಶಿಸ್ತು ಮತ್ತು ಸ್ಥಿರತೆ ತರಲು ಅವಿರತವಾಗಿ ಶ್ರಮಿಸುತ್ತದೆ ಎಂದು ತಾರೀಖ್ ರಹಮಾನ್ ವಾಗ್ದಾನ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

ಡಿಸೆಂಬರ್ 12 ರಂದು ಹತರಾದ ಬಿಎನ್‌ಪಿ ನಾಯಕ ಉಸ್ಮಾನ್ ಹದಿ ಅವರು ಇದೇ ವೇಳೆ ತಾರೀಖ್ ಸ್ಮರಿಸಿದ್ದಾರೆ. ಉಸ್ಮಾನ್ ಹದಿ ಅವರು ಪ್ರಜಾತಂತ್ರ ದೇಶದ ಕನಸು ಕಂಡಿದ್ದರು. ಅವರ ಕನಸು ನನಸು ಮಾಡಲು ಬಿಎನ್ಪಿ ಪಕ್ಷ ಕೆಲಸ ಮಾಡುತ್ತಿದೆ ಎಂದು ತಾರೀಖ್ ಪ್ರಮಾಣ ಮಾಡಿದ್ದಾರೆ.

ಹೆಚ್ಚಿನ ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *