Headlines

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!


ದೈವಸ್ಥಾನಕ್ಕೆ ಸಚಿವ ತಿಮ್ಮಾಪುರ ಭೇಟಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ

ಉಡುಪಿ, ಫೆಬ್ರವರಿ 09: ವಿಧಾನ ಸಭೆ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಭಾರಿ ಸದ್ದು ಮಾಡಿತ್ತು. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಹಿಡಿದಿದ್ದವು. ಈ ಬೆನ್ನಲ್ಲೇ ಸಚಿವರು ದೈವದ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ನೇಮೋತ್ಸವ ದಿನದಂದೇ ಕುಟುಂಬ ಸಮೇತ ತಿಮ್ಮಾಪುರ ಅವರ ಭೇಟಿಯ ಗಮನ ಸೆಳೆದಿದೆ. ಇದೇ ವೇಳೆ ಸನ್ನಿಧಿಯ ನೂತನ ಗೋಪುರ ಮತ್ತು ಹೊಸ ಕಟ್ಟಡವನ್ನೂ ಅವರು ಉದ್ಘಾಟಿಸಿದ್ದಾರೆ.

ಆಪ್ತನ ಆಹ್ವಾನದ ದೈವಸ್ಥಾನಕ್ಕೆ ಭೇಟಿ

ಆಪ್ತ ಜೀವನಶೆಟ್ಟಿ ಆಹ್ವಾನದ ಆಹ್ವಾನದ ಸಚಿವ ತಿಮ್ಮಾಪುರ ಅವರು ಧೂಮಾವತಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಸಹಿತ ಬಂದು ದೈವದ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ವಿಪಕ್ಷಗಳು ಮಾಡಿದ್ದ ಅಬಕಾರಿ ಹಗರಣದಲ್ಲಿ ಉಡುಪಿಯ ಬಿಳಿಯಾರು ಮೂಲದ ಜೀವನ್ ಶೆಟ್ಟಿ ಹೆಸರು ಕೂಡ ಕೇಳಿಬಂದಿತ್ತು. ಹಗರಣ ಕುರಿತಾದ ಆಡಿಯೋದಲ್ಲಿ ಸದ್ಯ ಧಾರವಾಡದಲ್ಲಿ ವೈನ್ ಮರ್ಚೆಂಟ್ ಅಸೋಸಿಯೇಷನ್ ​​ಪದಾಧಿಕಾರಿಯಾಗಿರುವ ಜೀವನ್ ಶೆಟ್ಟಿ ಹೆಸರು ಉಲ್ಲೇಖವಾಗಿತ್ತು. ಸಚಿವರ ಹೆಸರಲ್ಲಿ ಜೀವನಶೆಟ್ಟಿ ಕಿರುಕುಳ ಸೇರಿದಂತೆ ಎಂಬ ಮಾತುಗಳು ಅದರಲ್ಲಿದ್ದವು.

ಇದನ್ನೂ ಓದಿ: ಅಬಕಾರಿ ಸಚಿವ ತಿಮ್ಮಾಪುರಕ್ಕೆ ಸಂಕಷ್ಟ; ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಇನ್ನು ದೈವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಸಚಿವರು, ಜೀವನ್ ಶೆಟ್ಟಿ ಅವರು ಇಲ್ಲಿಗೆ ಬರುವಂತೆ ಕರೆದಿದ್ದಕ್ಕೆ ನಾನು ಬಂದಿದ್ದೇನೆ. ಕುಟುಂಬದ ಜೊತೆಗೆ ಬಂದು ದೈವದ ಆಶೀರ್ವಾದ ಪಡೆದಿದ್ದು, ದೈವಸ್ಥಾನದ ಕಟ್ಟಡಕ್ಕೆ ಸಹಕಾರ ಮಾಡಿದವರನ್ನು ಸನ್ಮಾನಿಸಿದ್ದಾರೆ. ಇಂತಹ ದೈವದ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಎಲ್ಲರಿಗೂ ದೇವರ ಅನುಗ್ರಹ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಜೊತೆಗೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಆರೋಪಗಳೆಲ್ಲ ಸುಳ್ಳು. ಅಧಿವೇಶನದಲ್ಲಿ ಎಲ್ಲಾ ವಿಚಾರವನ್ನು ನಾನು ಹೇಳಿದ್ದೇನೆ ಎಂದು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *