ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್

ಮನೆ ಕಟ್ಟಲು ಅನುಮತಿ ನೀಡದ ಪಿಡಿಒ: ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ, ವಿಡಿಯೋ ವೈರಲ್


ವಿಜಯನಗರ, ಫೆಬ್ರವರಿ 17: ಮನೆ ಕಟ್ಟಲು ಪರವಾನಗಿ ನೀಡಿದ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆ ನಿರ್ಮಾಣಕ್ಕಾಗಿ ಈ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದರೂ ಅನುಮತಿ ನೀಡುತ್ತಿಲ್ಲವೆಂದು ರೈತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಇಲ್ಲದೇ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಕಳೆದ ಆರು ತಿಂಗಳಿಂದ ಕಚೇರಿಗೆ ಸುತ್ತಾಡಿದ್ದಾರೆ ಎಂದು ಅವರು ಹೇಳಿದರು. ಈ ವೇಳೆ ಪಿಡಿಯೋ ಆಗಿರುವ ಕೃಷ್ಣಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಯಲ್ಲೇ ಅರ್ಧ ಲೀಟರ್ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯನ್ನು ಗಮನಿಸಿದ ಪಿಡಿಯೊ ಕೃಷ್ಣಪ್ಪ ಹಾಗೂ ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ರೈತನನ್ನು ರಕ್ಷಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *