Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 11ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 11ರ ದಿನಭವಿಷ್ಯ


ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರಂದು ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರು ಯೋಗ, ರೇಕಿ, ಪ್ರಾಣಾಯಾಮ ಇಂಥ ಕೋರ್ಸ್‌ಗಳಿಗೆ ಸೇರ್ಪಡೆ ಆಗುವ ಬಗ್ಗೆ ಯೋಚಿಸುತ್ತೀರಿ. ಹಣವನ್ನು ಪಾವತಿ ಮಾಡಿ, ಕಾಯ್ದಿರಿಸಿದ ಸೈಟು, ವಿಲ್ಲಾ ಅಥವಾ ಫ್ಲ್ಯಾಟ್ ಬಗ್ಗೆ ಈ ದಿನ ಅಪ್ ಡೇಟ್ ಸಿಗಲಿದೆ. ವೃತ್ತಿಯಲ್ಲಿ ವಕೀಲರಾಗಿ ಇರುವವರು ಹೊಸ ಕಚೇರಿ ಖರೀದಿ ಮಾಡುವ ಅಥವಾ ಲೀಸ್ ಪಡೆಯುವ ಬಗ್ಗೆ ಮಾತುಕತೆ ನಡೆಸಿದ್ದರು.

ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗೆ ಸಿದ್ಧತೆ ಮಾಡಿಕೊಳ್ಳಲು ಹೆಚ್ಚು ಸಮಯವನ್ನು ಮೀಸಲಿಡಲಾಗಿದೆ. ವಿವಾಹಿತರಿಗೆ ಸಂಗಾತಿ ಜೊತೆ ಇರುವಂಥ ಅಭಿಪ್ರಾಯ ಭೇದ ಇದ್ದಲ್ಲಿ ಅದನ್ನು ನಿವಾರಿಸಿಕೊಳ್ಳುವ ವೇದಿಕೆ ದೊರೆಯಲಿದೆ. ಮಕ್ಕಳ ಸಲುವಾಗಿ ಸಮಗ್ರವಾಗಿ ಬರುವಂಥ ಒಟಿಟಿ ಸಬ್ ಸ್ಕ್ರಿಪ್ಷನ್ ಪಡೆದುಕೊಳ್ಳುವುದಕ್ಕೆ ಅಥವಾ ಹೊಸದಾಗಿ ಇಂಟರ್ ನೆಟ್ ಕನೆಕ್ಷನ್ ತೆಗೆದುಕೊಳ್ಳುವುದಕ್ಕೆ ಆಲೋಚನೆ ಮಾಡಲಾಗಿರುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಮನೆಗೆ ದೂರದಲ್ಲಿಲ್ಲದ ಸಂಬಂಧಗಳು ಬರುವಂಥ ಯೋಗ ಈ ದಿನ ಇದೆ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿರುವವರು ಅದಕ್ಕೆ ಸಿದ್ಧತೆ ಮಾಡುವುದಕ್ಕೆ ಹೆಚ್ಚಿನ ಸಮಯ ಇಡಲಾಗಿದೆ. ನಿಮ್ಮ ಸೋಷಿಯಲ್ ಕಾಂಟ್ಯಾಕ್ಟ್ ಗಳನ್ನು ಪ್ರಮುಖ, ಆಗಬೇಕಾದ ಕೆಲಸಗಳನ್ನು ಮಾಡಿ ಮುಗಿಸುವಲ್ಲಿ ಯಶಸ್ವಿಯಾಗಿದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *