ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ

ಶಿವ ಅಷ್ಟಕವನ್ನು ಶ್ರವಣ ಮಾಡುವುದು ಅಥವಾ ಪಠಣ ಮಾಡುವುದು ಅಥವಾ ಈಶ್ವರನ ದೇವಸ್ಥಾನದಲ್ಲಿ ಕ್ಷೀರಾಭಿಷೇಕ ಮಾಡುವುದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಮಾಡುವ ಪ್ರಯತ್ನ ವಿಫಲವಾಗಿದೆ. ಹೊಸದಾಗಿ ವಹಿಸಿಕೊಂಡ ಜವಾಬ್ದಾರಿಗಳಲ್ಲಿ ಯಶಸ್ವಿಯಾಗುತ್ತೀರಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ದುಡಿಮೆಯು ನಿರೀಕ್ಷೆ ಮಟ್ಟದಲ್ಲಿ ಇಲ್ಲ ಎಂಬುದು ಬಹಳವಾಗಿ ಕೊರೆಯಲು ಆರಂಭವಾಗುತ್ತದೆ. ಸ್ನೇಹಿತರ ಯಾರೋ ನಿಮ್ಮ ಉದ್ದೇಶಕ್ಕೆ ಕೈ ಜೋಡಿಸಲು ಮುಂದೆ ಬರಲಿದ್ದಾರೆ. ಒಂದು ಕೆಲಸವನ್ನು ಮುಗಿಸಲು ಇತರರಿಗೆ ಒಪ್ಪಿಸುವುದರಿಂದ ಅವರಿಗೆ ಸಲಹೆ- ಸೂಚನೆ, ಮಾರ್ಗದರ್ಶನ ನೀಡುವುದಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ಆಗಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಈ ದಿನ ಚಂಚಲತೆ ವಿಪರೀತ ಕಾಡುತ್ತದೆ. ಆತುರದಲ್ಲಿ ನಿಮ್ಮ ತೀರ್ಮಾನವನ್ನು ಹೇಳಲು ಹೋಗಬೇಡಿ. ಇನ್ನು ನಿಮ್ಮ ಬಳಿ ಇರುವ ಹಣಕ್ಕೆ ಎಷ್ಟು ಅಷ್ಟಕ್ಕೆ ಮಾತ್ರ ಯೋಜನೆ ಹಾಕಿಕೊಳ್ಳಿ. ಏನನ್ನಾದರೂ ದಕ್ಕಿಸಿಕೊಳ್ಳಲು ಬಲ್ಲೆ ಎಂಬ ಆಲೋಚನೆ ಅಪಾಯಕಾರಿ ಆಗಲಿದೆ. ಸರ್ಕಾರಿ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮುಗಿಸಿಕೊಳ್ಳುವುದಕ್ಕೆ ಎಲ್ಲ ಪ್ರಯತ್ನ ಮಾಡಿದ ನಂತರವೂ ಕೊನೆಗೆ ಅದು ನಿಂತು ಬಿಡುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಬೆನ್ನು ನೋವು ವಿಪರೀತವಾಗಿ ಕಾಡಬಹುದು. ಅದರಲ್ಲಿಯೂ ದ್ವಿಚಕ್ರ ವಾಹನವನ್ನು ಹೆಚ್ಚಾಗಿ ಬಳಸುತ್ತೀರಿ ಅಂತಾ ವೈದ್ಯರ ಬಳಿ ತೆರಳಿ, ಸಲಹೆ ತೆಗೆದುಕೊಳ್ಳುವುದು ಕ್ಷೇಮ. ಯಾವುದಕ್ಕೂ ಇರಲಿ ಎಂದು, ಬಹಳ ಹಿಂದೆ ಸಣ್ಣ ಪ್ರಮಾಣದಲ್ಲಿ ಮಾಡಿದ್ದ ಹೂಡಿಕೆಯೊಂದು ಈಗ ಭಾರೀ ದೊಡ್ಡ ಲಾಭ ತಂದುಕೊಡಲಿದೆ ಎಂಬುದು ನಿಮ್ಮ ಗಮನಕ್ಕೆ ಬರಲಿದೆ. ಆದರೆ ಈ ಬಗ್ಗೆ ಎಲ್ಲ ಕಡೆ ಹೇಳಿಕೊಂಡು ಬರಬೇಡಿ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *