ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ


ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಭಂದದ ಸಮಾರಂಭ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರವಿರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು ಕಲಿಯಲು ಆಸಕ್ತಿ ತೋರಿಸಿ, ಕೋರ್ಸ್‌ಗಳಿಗೆ ಸೇರುವ ಸಾಧ್ಯತೆಯಿದೆ. ಇನ್ನು ಓದಿನ ಜೊತೆಗೆ ಪಾರ್ಟ್ ಟೈಂ ಉದ್ಯೋಗ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಬಗೆಗಿನ ವಿಶ್ವಾಸಾರ್ಹವು ಹೆಚ್ಚಾಗಿರುತ್ತದೆ. ಕೆಲಸದಲ್ಲಿ ನಿಮ್ಮ ಆಲೋಚನೆ ಮತ್ತು ಹೊಸ ವಿಧಾನಗಳನ್ನು ಅಳವಡಿಸಿಕೊಳ್ಳುವ ರೀತಿ ಮೆಚ್ಚುಗೆ ಪಡೆಯುತ್ತದೆ. ಒತ್ತಡವನ್ನು ಗೆಲ್ಲಲಾಗಿದೆ. ಈ ಹಿಂದೆ ನೀವು ಮಾಡಿದ ದೊಡ್ಡ ಖರ್ಚುಗಳಿಗೆ ಹಣ ಹೊಂದಿಸುವುದು ಎಂಬ ಚಿಂತೆಯಲ್ಲಿದ್ದರೆ ಪರಿಹಾರ ದೊರೆಯಲಿದೆ. ನಿಮ್ಮ ಮಾತಿನಿಂದ ಕುಟುಂಬದಲ್ಲಿ ಸಾಮರಸ್ಯ, ಒಗ್ಗಟ್ಟು ತರುವಲ್ಲಿ ಯಶಸ್ಸು ಕಾಣುವಿರಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕುಟುಂಬದಲ್ಲಿ ಸಣ್ಣ- ಪುಟ್ಟ ಮನಸ್ತಾಪ ಉಂಟಾದಾಗ ಮೃದುವಾದ ಮಾತುಗಳನ್ನಾಡಿ, ಅದನ್ನು ಪರಿಹರಿಸುವ ಕಡೆಗೆ ಗಮನ ನೀಡಿ. ಇನ್ನು ಪ್ರೀತಿಯಲ್ಲಿ ಇರುವವರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಮಯ ಕೊಡಿ. ಜಠಕ್ಕೆ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳಬಹುದು. ನಿಯಮಿತ ಆಹಾರ ಸೇವನೆ ಮತ್ತು ವಿಶ್ರಾಂತಿಗೆ ಪ್ರಾಮುಖ್ಯ ನೀಡಿ. ಸ್ನೇಹಿತರ ಜೊತೆ ಒಳ್ಳೆಯ ಸಮಯ ಕಳೆಯುವ ಅವಕಾಶ ಸಿಗುತ್ತದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *