Headlines

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಹೊಡೆದಾಟ: ಇಬ್ಬರು ಆಸ್ಪತ್ರೆಗೆ ದಾಖಲು

ಸಿಲಿಂಡರ್​ಗಾಗಿ ಗ್ಯಾಸ್ ಏಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಹೊಡೆದಾಟ: ಇಬ್ಬರು ಆಸ್ಪತ್ರೆಗೆ ದಾಖಲು


ಸಿಲಿಂಡರ್ಗಾಗಿ ಗ್ಯಾಸ್ ಎಜೆನ್ಸಿ ಸಿಬ್ಬಂದಿ-ಗ್ರಾಹಕನ ಮಧ್ಯೆ ಹೊಡೆದಾಟ: ಇಬ್ಬರು ಆಸ್ಪತ್ರೆಗೆ ದಾಖಲು

ಹಾವೇರಿ, ಏಪ್ರಿಲ್ 10: ಅತ್ತ ಮಧ್ಯ ಪ್ರಾಚ್ಯದಲ್ಲಿ ಕದನವಿರಾಮ ಘೋಷಣೆಯಾಗಿದ್ದರೂ, ಇತ್ತ ಕರುನಾಡಿನಲ್ಲಿ ಮಾತ್ರ ಗ್ಯಾಸ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಸೌದೆ ಒಲೆಯಲ್ಲೇ ಅಡುಗೆ ಮಾಡಬೇಕಾದ ಪರಿಸ್ಥಿತಿ ಇದೆ. ಹೀಗಿರುವಾಗ ಅಡುಗೆ ಸಿಲಿಂಡರ್ಗಾಗಿ (ಗ್ಯಾಸ್ ಸಿಲಿಂಡರ್) ಹಾವೇರಿಯಲ್ಲಿ ಗಲಾಟೆಯೇ (ಹೋರಾಟ) ನಡೆದಿದೆ. ಇ-ಕೆವೈಸಿ ಮಾಡಿಸಲು ಬಂದ ಗ್ರಾಹಕರ ಮೇಲೆ ಹಲ್ಲೆ HP ಗ್ಯಾಸ್ ಎಜೆನ್ಸಿ ಸಿಬ್ಬಂದಿ ಹಲ್ಲೆ ಮಾಡಿರುವಂತಹ ಘಟನೆ ನಗರದ ಹುಕ್ಕೇರಿಮಠದ ಎದುರಿರುವ HP ಗ್ಯಾಸ್ ಕಚೇರಿಯಲ್ಲಿ ನಡೆದಿದೆ.

ನಡೆದಿದ್ದೇನು?

ಬ್ಲಾಕ್ ನಲ್ಲಿ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ, ನಮಗೆ ಸಿಲಿಂಡರ್ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕನಕಪುರ ಗ್ರಾಮದ ಮಾಲತೇಶ್ ಗಾಜಿ ಮೇಲೆ ಮ್ಯಾನೇಜರ್ ಅಲೀಂ ಮತ್ತು ಗಣೇಶ ಸೇರಿ ನಾಲ್ವರಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಮ್ಯಾನೇಜರ್ ಅಲೀಂ ಮತ್ತು ಗಾಯಾಳು ಗ್ರಾಹಕ ಮಾಲತೇಶ್ರನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ನಾವು ಹಲ್ಲೆ ಮಾಡಿಲ್ಲ ಎಂದ ಸಿಬ್ಬಂದಿ

ಇನ್ನು ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಗ್ರಾಹಕರು ಒತ್ತಾಯಿಸಿದ್ದಾರೆ. ಆದರೆ ನಾವು ಹಲ್ಲೆ ಮಾಡಿಲ್ಲ, ಅವರೇ ಹಲ್ಲೆ ಮಾಡಿ ನಮ್ಮ ಮೇಲೆ ದೂರು ನೀಡಲು ಮುಂದಾಗಿದ್ದಾರೆ ಎಂದು HP ಗ್ಯಾಸ್ ಏಜೆನ್ಸಿ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಸಿಸಿಟಿವಿ ಪರಿಶೀಲನೆ ಮಾಡುವಂತೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದರು.

HP ಗ್ಯಾಸ್ ಮ್ಯಾನೇಜರ್ ಅಲೀಂ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ HP ಗ್ಯಾಸ್ ಮ್ಯಾನೇಜರ್ ಅಲೀಂ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕಚೇರಿಯಲ್ಲಿ ಕ್ಯೂ ಇತ್ತು. ಗ್ರಾಹಕ ಕ್ಯೂ ಬಿಟ್ಟು ನಮ್ಮ ಬಳಿ ಬಂದು ಇ-ಕೆವೈಸಿ ಮಾಡಿ. ಕಛೇರಿಯಲ್ಲಿ ಫ್ಯಾನ್ ಇಲ್ಲ, ಸಿಲಿಂಡರ್ ಇಲ್ಲ ಹೇಗೆ ಕ್ಯೂ ನಿಲ್ಲುವುದು ಅಂತಾ ಬಂದು ಜಗಳ ಮಾಡಿದ್ದಾರೆ. ನಮ್ಮ ಮೇಲೆ ಗ್ರಾಹಕನೇ ಹಲ್ಲೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ

ಸದ್ಯ ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತ ಜಿಲ್ಲಾಸ್ಪತ್ರೆ ಮುಂದೆ ಕಚೇರಿಯ ಸಿಬ್ಬಂದಿ ಮತ್ತು ಗ್ರಾಹಕರು ಕಡೆಯ ಜನರು ಜಮಾವಣೆಗೊಂಡಿದ್ದಾರೆ. ದೂರು-ಪ್ರತಿದೂರು ಆಗುವ ಸಾಧ್ಯತೆ ಕೂಡ ಇದೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *