ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ; ಕಿರುತೆರೆ ನಟಿ ಮೇಲೆ ಕೇಸ್

ಸ್ನೇಹಿತೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್​ಗೆ ಪ್ರಚೋದನೆ; ಕಿರುತೆರೆ ನಟಿ ಮೇಲೆ ಕೇಸ್


ಸ್ನೇಹಿತೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ಗೆ ಪ್ರಚೋದನೆ ನೀಡಿದ ಆರೋಪದಡಿ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಕೇಸ್ ದಾಖಲಾಗಿದೆ. 2 ಕೋಟಿ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡಲು ಪ್ರಚೋದನೆ ನೀಡಿದ ಆರೋಪ ಅವರ ಮೇಲೆ ಇದೆ. 61 ವರ್ಷದ ಪಾರ್ವತಿ ಎಂಬುವವರ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ.

ಆಶಾ ಅವರು ಸೀರಿಯಲ್ ನಟಿ ಎಂದು ಪಾರ್ವತಿ ಬಳಿ ಪರಿಚಯ ಮಾಡಿಕೊಂಡಿದ್ದರು. ಪಾರ್ವತಿ ತಾವು ಕೆಲಸ ಮಾಡುತ್ತಿರುವ ಕಂಪನಿ ಜೊತೆಯೇ ಮದುವೆ ಆಗಿದ್ದರು. ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಪಾರ್ವತಿಗೆ ಆಶಾ ಬಲವಂತೆ. ಜೊತೆಗೆ 2 ಕೋಟಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುವಂತೆ ಒತ್ತಡ ಹೇರಿದ್ದರು. ಇದಕ್ಕೆ ಪಾರ್ವತಿ ಒಪ್ಪದಿದ್ದಕ್ಕೆ ಖಾಸಗಿ ವಿಡಿಯೋಗಳು, ವಾಯ್ಸ್ ರೆಕಾರ್ಡ್ ಹಾಗೂ ಖಾಸಗಿ ಫೋಟೋಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆದರೆ, ಪಾರ್ವತಿ ಈ ಬೆದರಿಕೆಗೆ ಹೆದರುವುದಿಲ್ಲ. ನಂತರ ವಿಡಿಯೋ ಹಾಗೂ ಫೋಟೋಗಳನ್ನು ಪಾರ್ವತಿ ತಮ್ಮ ಪರಿಚಯ ಇರುವ ವ್ಯಕ್ತಿಗಳಿಗೆ ಕಳಿಸಿದ್ದರಂತೆ. ಈ ಹಿನ್ನಲೆಯಲ್ಲಿ ತನ್ನ ಘನತೆಗೆ ಕುಂದುಂಟಾಗಿದೆ ಮತ್ತು ತನ್ನ ಖಾಸಗಿ ಡೇಟಾವನ್ನು ಕದ್ದಿದ್ದಾರೆಂದು ಆರೋಪಿಸಿ ಪಾರ್ವತಿ ದೂರಿನಲ್ಲಿ ಇರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *