Headlines

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ


ಬೆಂಗಳೂರು, ಜನವರಿ 15: ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು. ಬೆಂಕಿಯ ಮಾಹಿತಿ ಲಭ್ಯವಾಗುವಂತೆ ಅಗ್ನಿಶಾಮಕ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆ ಕುರಿತು ಬೇಗೂರು ಪರಿಶೀಲನೆ ನಡೆಸುತ್ತಿದ್ದಾರೆ.



Source link

Leave a Reply

Your email address will not be published. Required fields are marked *