
ಬಳ್ಳಾರಿ, ಏಪ್ರಿಲ್ 9: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ನಿರ್ಮಾಣದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತದೆ, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.