ಕುದುರೆಮುಖ ಉದ್ಯಾನವನದ 25ಕ್ಕೂ ಹೆಚ್ಚು ಕಡೆ ಬೆಂಕಿ: ಹೊತ್ತಿ ಉರಿಯುತ್ತಿರುವ ಅಪರೂಪದ ಶೋಲಾ ಹುಲ್ಲುಗಾವಲು

ಕುದುರೆಮುಖ ಉದ್ಯಾನವನದ 25ಕ್ಕೂ ಹೆಚ್ಚು ಕಡೆ ಬೆಂಕಿ: ಹೊತ್ತಿ ಉರಿಯುತ್ತಿರುವ ಅಪರೂಪದ ಶೋಲಾ ಹುಲ್ಲುಗಾವಲು

ಕುದುರೆಮುಖ ಉದ್ಯಾನವನದ 25ಕ್ಕೂ ಹೆಚ್ಚು ಕಡೆ ಬೆಂಕಿ: ಹೊತ್ತಿ ಉರಿಯುತ್ತಿರುವ ಅಪರೂಪದ ಶೋಲಾ ಹುಲ್ಲುಗಾವಲು

ಚಿಕ್ಕಮಗಳೂರಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ನಾಶವಾಗುತ್ತಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬೆಂಕಿ ಬಿಸಿಲ ಧಗೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ಬಿಸಿಲ ಧಗೆಯ ಜೊತೆ ಬೆಂಕಿಗೆ ಹೊತ್ತಿ ಉರಿಯುತ್ತಿದೆ.

ಇದನ್ನೂ ಓದಿ: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿ ಬರುವ ಈ ಶೋಲಾ ಹುಲ್ಲುಗಾವಲು ಹೊತ್ತು ಉರಿಯುತ್ತಿದ್ದು, ಇಲ್ಲಿನ 25ಕ್ಕೂ ಹೆಚ್ಚು ಕಡೆ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಟ, ವಾಲೀಕುಂಜಗಿರಿ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದನ್ನೂ ಓದಿ:  ಕಾಂಗ್ರೆಸ್ ಟಿಕೆಟ್ ಘೋಷಣೆಗೂ ಮೊದಲೇ ಇಂದು ನಾಮಪತ್ರ ಸಲ್ಲಿಸಲ್ಲಿರುವ ಸಮರ್ಥ ಶಾಮನೂರು

ಈ ಬೆಂಕಿಯಿಂದಾಗಿ ನೆಲದಲ್ಲಿ ಗೂಡುಕಟ್ಟುವ ಪಕ್ಷಿ, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿರೋ ಸಾಧ್ಯತೆ ಇದೆ. ನೂರಾರು ಎಕರೆಗಟ್ಟಲೇ ಅರಣ್ಯ ಬೆಂಕಿಗೆ ಆಹುತಿಯಾಗಿದ್ದರೂ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸೈಲೆಂಟ್ ಕಟ್ಟರ್ ಬಳಸಿ 10,000ಕ್ಕೂ ಅಧಿಕ ಮರಗಳ ಕಡಿತ: ದೂರು ನೀಡಿದ ಫಾರೆಸ್ಟ್ ಗಾರ್ಡ್‌ಗೆ ಅಮಾನತಿನ ಶಿಕ್ಷೆ

ಅರಣ್ಯ ವೀಕ್ಷಕರ ನೇಮಕ ಮಾಡಿಕೊಂಡಿಲ್ಲ, ಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಯಾವುದನ್ನೂ ಮಾಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ವಾರದಿಂದ ಅರಣ್ಯ ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಖಾಲಿ: ವಾಟರ್‌ ಹೀಟರ್ ಬಳಸಿ ಸಾಂಬಾರ್ ಮಾಡಿದ ಯುವಕ: ವೀಡಿಯೋ ಭಾರಿ ವೈರಲ್

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಸಚಿವರು ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳ ಆಗ್ರಹಿಸಿದ್ದು, ಕಾರ್ಕಳ ಡಿಎಫ್ಓ ಶಿವರಾಮ್ ಬಾಬು ವಿರುದ್ಧ ಪರಿಸರವಾದಿಗಳು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧದ ನಡುವೆ ಕುಸ್ತಿ ಚಾಂಪಿಯನ್ 19 ವರ್ಷದ ಸಲೇಹ್ ಮೊಹಮ್ಮದಿಯನ್ನು ಗಲ್ಲಿಗೇರಿಸಿದ ಇರಾನ್

ಈ ಕುದುರೆಮುಖ ಅರಣ್ಯವೂ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಈ ನಾಲ್ಕು ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿದೆ.

ಇದನ್ನೂ ಓದಿ: ಅಮೆರಿಕಾದ F-35 ಯುದ್ಧ ವಿಮಾನಕ್ಕೂ ಹೊಡೆಯಿತಾ ಇರಾನ್: ಅಮೆರಿಕಾ ಹೇಳಿದ್ದೇನು?

Source link

Leave a Reply

Your email address will not be published. Required fields are marked *