ಬೆಂಗಳೂರು, ಡಿಸೆಂಬರ್ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್.ರಾಜಣ್ಣ ಭೇಟಿ ಮಾಡಿದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ನೀಡಿದ್ದಾರೆ. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ ಇದ್ದೇವೆ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದ್ರು ಕೂಡ ನನ್ನ ಹಿಂದಿನ ಎಲ್ಲ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.