ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್, ವಿಡಿಯೋ ನೋಡಿ

ಬೆಂಗಳೂರಿನಲ್ಲಿ ಕುಸಿದು ಬಿದ್ದ ರಸ್ತೆ;  ಫುಲ್  ಟ್ರಾಫಿಕ್ ಜಾಮ್, ವಿಡಿಯೋ ನೋಡಿ


ಆನೇಕಲ್ (ಬೆಂಗಳೂರು) (ಫೆಬ್ರವರಿ.04): ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾದ ಬೆಂಗಳೂರು-ಹೊಸೂರು (ಬೆಂಗಳೂರು ಹೊಸೂರು ರಸ್ತೆ) ರಾಷ್ಟ್ರೀಯ ಹೆದ್ದಾರಿ ಟ್ರಾಧೀರ್ ಕುಸಿದುಬಿದ್ದಿದ್ದು, ಫುಲ್ ಫಿಕ್ ಜಾಮ್ (ಟ್ರಾಫಿಕ್ ಜಾಮ್) ಉಂಟಾಗಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿರುವಾಗಲೇ ಹಳೇ ಚಂದಾಪುರದ ಬಳಿ ರಸ್ತೆ ಸುಮಾರು 20 ಅಡಿ ಆಳಕ್ಕೆ ಕುಸಿದಿದ್ದು, ಚಂದಾಪುರದಿಂದ ಕರ್ನಾಟಕದ ಗಡಿ ಅತ್ತಿಬೆಲೆವರೆಗೆ ಕಿಲೋಮೀಟರ್ ಗಟ್ಟಲೆ ಸಂಚಾರ ಜಾಮ್ ಆಗಿದೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ಹಿರಿಯ ಶಾಲಾ ಮಕ್ಕಳು ಸಕಾಲಕ್ಕೆ ತಲುಪಲು ಪರದಾಡಿದರು.

ಹಳೇ ಚಂದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ ಸಮೀಪದ ಲೇಔಟ್‌ಗಳಿಂದ ಹರಿದು ಬರುತ್ತಿರುವ ಸ್ಯಾನಿಟರಿ ನೀರು ರಸ್ತೆಯ ಅಡಿಭಾಗಕ್ಕೆ ನುಗ್ಗಿದ್ದು, ಮಣ್ಣು ಸಡಿಲಗೊಂಡು ಬೃಹತ್ ಕುಸಿತಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *