Headlines

ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​: ಓರ್ವ ಮಹಿಳೆಯ ಕಾಲು ಕಟ್, ಇಬ್ಬರಿಗೆ ಗಂಭೀರ ಗಾಯ!

ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​: ಓರ್ವ ಮಹಿಳೆಯ ಕಾಲು ಕಟ್, ಇಬ್ಬರಿಗೆ ಗಂಭೀರ ಗಾಯ!


ಗದಗ,ಫೆ.24: ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ. ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಹರಿದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ವಿಭಾಗದ ಮಾಸ್ಕಿ ಡಿಪೋಗೆ ಸೇರಿದ ಬಸ್ ಚಾಲಕ, ನಿಲ್ದಾಣದ ಒಳಗೆ ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯರ ಮೇಲೆ ಬಸ್ ಹರಿದಿದೆ. ಸುನಗ ಗ್ರಾಮದ ನಿವಾಸಿ ಶಾಂತವ್ವ ಸಿದ್ದವ್ವ ಕೊರ್ತಿ ಎಂಬುವವರು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಹರಿದ ಪರಿಣಾಮ ಅವರ ಕಾಲು ತುಂಡ ಆಗಿದ್ದರೆ, ಬೆನ್ನಿನ ಭಾಗಕ್ಕೂ ಗಂಭೀರ ಗಾಯವಾಗಿತ್ತು. ಥಮಿಕ ಚಿಕಿತ್ಸೆಯ ನಂತರ ಶಾಂತವ್ವ ಅವರ ಸ್ಥಿತಿ ಚಿಂತಾಜನಕವಾಗಿ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್‌ಡಿಎಂ (SDM) ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರು ಮಹಿಳೆಯರಿಗೂ ಗಂಭೀರ ಗಾಯ ಘಟನೆ ನಡೆದ ಗದಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯ ತೋರಿದ ಬಸ್ ಚಾಲಕನ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಬಸ್ ನಿಲ್ದಾಣದ ಒಳಗೆ ವೇಗವಾಗಿ ಬಸ್ ಚಲಿಸಲು ಕಾರಣವೇನು ಎಂಬ ಬಗ್ಗೆ ಸಾರಿಗೆ ಸಂಸ್ಥೆಯು ಆಂತರಿಕ ತನಿಖೆಗೆ ಆದೇಶಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *