ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಜಾಗದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುತ್ತು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಿಸಿದ್ದಾರೆ. ಕಣ್ಮುಂದೆ ಸುಟ್ಟು ಕರಕಲಾದ ಮೆಕ್ಕೆಜೋಳವನ್ನು ನೋಡಿ ರೈತ ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.