ಗಿರಿನಗರ ಬ್ಯಾಂಕ್ ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ!
ಬೆಂಗಳೂರು, ಫೆಬ್ರವರಿ 14: ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಭಾರೀ ಚಿನ್ನ ಕಳ್ಳತನ (ಚಿನ್ನದ ದರೋಡೆ) ಘಟನೆ ನಡೆದಿದ್ದು, ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕ್‌ನಲ್ಲಿ ಅಡ ಇಟ್ಟಿದ್ದ ಗ್ರಾಹಕರು ಚಿನ್ನಾಭರಣವನ್ನು ಕದ್ದು ಬೆಟ್ಟಿಂಗ್ ಆಟ ಆಡುವ ಚಟಕ್ಕಿಳಿದಿದ್ದ ಈತ, ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆಂದು ಆರೋಪಿಸಲಾಗಿದೆ.
ಆನ್‌ಲೈನ್ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ಮ್ಯಾನೇಜರ್
ಕಿರಣ್ ಕುಮಾರ್ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹತ್ತಿರ ಇದ್ದ ಕಾರಣ, ಮ್ಯಾನೇಜರ್ ಅವರ ಅನುಪಸ್ಥಿತಿಯಲ್ಲಿ ಸ್ವಲ್ಪಸ್ವಲ್ಪ ಚಿನ್ನ ಕದಿಯುತ್ತಿದ್ದ . ಜನವರಿ 2 ರಂದು ಗ್ರಾಹಕರು ತಮ್ಮ ಅಡವಿಟ್ಟ ಚಿನ್ನಕ್ಕೆ ಬಂದಾಗ ಲಾಕರ್ ಪರಿಶೀಲನೆ ವೇಳೆ ಕೆಲವು ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಬಳಿಕ ಇತರ ಪ್ಯಾಕೇಟ್ ಪರಿಶೀಲಿಸಿದ ಮ್ಯಾನೇಜರ್ 21 ಪ್ಯಾಕೇಟ್‌ಗಳಲ್ಲಿ ಕೆಲವು ಮತ್ತು 3 ಪ್ಯಾಕೆಟ್‌ಗಳಲ್ಲಿ ಸಂಪೂರ್ಣ ಚಿನ್ನ ಕಾಣೆಯಾಗಿರುವುದನ್ನು ಗಮನಿಸಲಾಗಿದೆ. ಈ ವೇಳೆ ಸುಮಾರು 4 ಕೋಟಿ ರೂ. ಮೌಲ್ಯದ 2,783 ಗ್ರಾಂ ಚಿನ್ನ ಕಾಣಿಕೆಯಾಗಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.
ಇದನ್ನೂ ಓದಿ ಕಾರಿನಲ್ಲಿ ಸಾಗಿಸುತ್ತಿದ್ದ ಐವರು ಆರೋಪಿಗಳ ಡ್ರಗ್ಸ್ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್
ಆಂತರಿಕ ವಿಚಾರಣೆ ವೇಳೆ ಕೃತ್ಯ ತಪ್ಪಿಸಿಕೊಂಡ ಕಿರಣ್, ಕದ್ದ ಚಿನ್ನವನ್ನು ಬೇರೆ ಬೇರೆ ಅಂಗಡಿಯಲ್ಲಿ ಗಿರವಿ ಹಾಕಿ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಬಳಸಿದ್ದನು. ಪ್ರಕರಣದ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಂತರ ಕಿರಣ್ ಕುಮಾರ್ ಬಂಧಿತರಾಗಿದ್ದಾರೆ. 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಉಳಿದ ಚಿನ್ನಾಭರಣ ಮತ್ತು ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.